Homeಅಂತರಾಷ್ಟ್ರೀಯಜಮ್ಮು ಕಾಶ್ಮೀರ ವಿಷಯದಲ್ಲಿ ಚೀನಾ ಹಸ್ತಕ್ಷೇಪ ತಿರಸ್ಕರಿಸುತ್ತೇವೆ; ಭದ್ರತಾ ಮಂಡಳಿಯಲ್ಲಿ ಭಾರತ ಹೇಳಿಕೆ

ಜಮ್ಮು ಕಾಶ್ಮೀರ ವಿಷಯದಲ್ಲಿ ಚೀನಾ ಹಸ್ತಕ್ಷೇಪ ತಿರಸ್ಕರಿಸುತ್ತೇವೆ; ಭದ್ರತಾ ಮಂಡಳಿಯಲ್ಲಿ ಭಾರತ ಹೇಳಿಕೆ

- Advertisement -
- Advertisement -

ಪಾಕಿಸ್ತಾನದ ಆಜ್ಞೆಯ ಮೇರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ವಿಷಯವನ್ನು ಚೀನಾ ಪ್ರಸ್ತಾಪಿಸಿದ ಒಂದು ದಿನದ ನಂತರ ಭಾರತವು, ತನ್ನ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಹಸ್ತಕ್ಷೇಪವನ್ನು “ದೃಢವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ಇದರ ನಡುವೆ, ಯುಎನ್ ವಿಶೇಷ ವರದಿಗಾರ ನಿಲ್ಸ್ ಮೆಲ್ಜರ್, ಭಾರತಕ್ಕೆ ಭೇಟಿ ನೀಡುವ ಬಗ್ಗೆ ಅವರು ಮಾಡಿದ ಮನವಿಗೆ ಭಾರತ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದ್ದಾರೆ. ಈ ಕುರಿತು ಪ್ರತಿವರ್ಷವೂ ಔಪಚಾರಿಕವಾಗಿ ಮನವಿ ಮಾಡಿದ್ದರೂ ಸಹ ಭಾರತಕ್ಕೆ ಭೇಟಿ ನೀಡುವುದರ ಕುರಿತಂತೆ ಒಮ್ಮೆಯೂ ಪ್ರತಿಕ್ರಿಯೆ ಬಂದಿಲ್ಲ ಎಂದಿದ್ದಾರೆ.

ಗುರುವಾರ, ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು “ಜಮ್ಮು ಮತ್ತು ಕಾಶ್ಮೀರದ ಭಾರತೀಯ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚೀನಾ ಯುಎನ್ ಭದ್ರತಾ ಮಂಡಳಿಯಲ್ಲಿ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ನಾವು ಗಮನಿಸಿದ್ದೇವೆ. ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಲು ಚೀನಾ ಪ್ರಯತ್ನಿಸಿದ್ದು ಇದೇ ಮೊದಲಲ್ಲ” ಎಂದು ಹೇಳಿದ್ದಾರೆ.

ಹಿಂದಿನ ಸಂದರ್ಭಗಳಂತೆ, ಅವರ ಈ ಪ್ರಯತ್ನಕ್ಕೆ ಅಷ್ಟೆನೂ ಬೆಂಬಲ ವ್ಯಕ್ತವಾಗಲಿಲ್ಲ. ನಮ್ಮ ಆಂತರಿಕ ವ್ಯವಹಾರಗಳಲ್ಲಿ ಚೀನಾದ ಹಸ್ತಕ್ಷೇಪವನ್ನು ನಾವು ದೃಢವಾಗಿ ತಿರಸ್ಕರಿಸುತ್ತೇವೆ ಅವರು ಹೇಳಿದರು.

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಟಿ ಎಸ್ ತಿರುಮೂರ್ತಿ, “ಪಾಕಿಸ್ತಾನದ ಮತ್ತೊಂದು ಪ್ರಯತ್ನ ವಿಫಲವಾಗಿದೆ! ಎಂದು ಹೇಳಿದ್ದಾರೆ. ಕಳೆದ ವರ್ಷದಿಂದ UNSCಯಲ್ಲಿ ಯಾವುದೇ ಫಲಿತಾಂಶ ಅಥವಾ ನಿರ್ಣಯವಿಲ್ಲದೆ ಈ ವಿಷಯವನ್ನು ಎತ್ತಿದ್ದು ಇದು ಮೂರನೇ ಬಾರಿ. ಮೊದಲು ಕಳೆದ ಆಗಸ್ಟ್‌ನಲ್ಲಿ ಮತ್ತು ಮತ್ತೆ ಜನವರಿಯಲ್ಲಿ ಪ್ರಸ್ತಾಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇದರ ನಡುವೆ ಜಿನೀವಾದಲ್ಲಿ, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ತಜ್ಞರು, ವಿಶೇಷ ವರದಿಗಾರರು ಸೇರಿದಂತೆ ಕಾಶ್ಮೀರ ಭೂಪ್ರದೇಶದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯನ್ನು ಪರಿಹರಿಸಲು “ತುರ್ತು ಕ್ರಮ” ತೆಗೆದುಕೊಳ್ಳುವಂತೆ ಭಾರತ ಮತ್ತು ಅಂತರರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಪರಿಸ್ಥಿತಿಯನ್ನು ಪರಿಹರಿಸಲು ಭಾರತವು ಯಾವುದೇ ನೈಜ ಮತ್ತು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಅಂತರರಾಷ್ಟ್ರೀಯ ಸಮುದಾಯವು ಮುಂದಿನ ಹೆಜ್ಜೆ ಇಡುತ್ತದೆ” ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...