Homeಮುಖಪುಟಪ್ಯಾಲೆಸ್ತೀನ್‌ಗೆ ಚೀನಾ ಬೆಂಬಲ: ಡಿಜಿಟಲ್ ನಕ್ಷೆಗಳಿಂದ ಇಸ್ರೇಲ್‌ ಹೆಸರು ಮಾಯ

ಪ್ಯಾಲೆಸ್ತೀನ್‌ಗೆ ಚೀನಾ ಬೆಂಬಲ: ಡಿಜಿಟಲ್ ನಕ್ಷೆಗಳಿಂದ ಇಸ್ರೇಲ್‌ ಹೆಸರು ಮಾಯ

- Advertisement -
- Advertisement -

ಚೀನಾದ ಉನ್ನತ ತಂತ್ರಜ್ಞಾನ ಕಂಪನಿಗಳಾದ ಅಲಿಬಾಬಾ ಮತ್ತು ಬೈಡೂ ಆನ್‌ಲೈನ್‌ನಲ್ಲಿ ಲಭ್ಯವಿರುವ ತಮ್ಮ ಡಿಜಿಟಲ್ ನಕ್ಷೆಗಳಿಂದ ಇಸ್ರೇಲ್‌ನ ಅಧಿಕೃತ ಹೆಸರನ್ನು ಕೈಬಿಟ್ಟಿವೆ. ಈ ಮೂಲಕ ಪ್ಯಾಲೆಸ್ತೀನ್‌ಗೆ ಚೀನಾ ಬೆಂಬಲ ಸೂಚಿಸಿದೆ.

ಇಸ್ರೇಲ್ ಮತ್ತು ಸಶಸ್ತ್ರ ಸಂಘಟನೆ ಹಮಾಸ್ ನಡುವಿನ ಯುದ್ಧದ ನಂತರ ಚೀನೀ ಅಂತರ್ಜಾಲವು ಈ ಕ್ರಮ ತೆಗೆದುಕೊಂಡಿದೆ. ಬೈಡೂ ಮತ್ತು ಅಲಿಬಾಬಾ ಇನ್ನು ಮುಂದೆ ಇಸ್ರೇಲ್‌ನ್ನು ಹೆಸರಿನಿಂದ ಉಲ್ಲೇಖಿಸುವುದಿಲ್ಲ ಎಂದು ವಾಲ್ ಸ್ಟ್ರೀಟ್ ಜರ್ನಲ್ ಸೋಮವಾರ ವರದಿ ಮಾಡಿದೆ.

”ಬೈಡೂವಿನ ಚೈನೀಸ್ ಭಾಷೆಯ ಆನ್‌ಲೈನ್ ನಕ್ಷೆಗಳು ಇಸ್ರೇಲ್‌ನ ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗಡಿಗಳು, ಹಾಗೆಯೇ ಪ್ಯಾಲೆಸ್ತೀನಿಯನ್ ಪ್ರದೇಶಗಳು ಮತ್ತು ಪ್ರಮುಖ ನಗರಗಳನ್ನು ಗುರುತಿಸುತ್ತವೆ, ಆದರೆ ದೇಶವನ್ನು ಹೆಸರಿನಿಂದ ಸ್ಪಷ್ಟವಾಗಿ ಗುರುತಿಸುವುದಿಲ್ಲ” ಎಂದು ವರದಿ ಹೇಳಿದೆ.

ಇನ್ನೂ ಆ ನಕ್ಷೆಯಲ್ಲಿ ಲಕ್ಸೆಂಬರ್ಗ್‌ನಂತಹ ಚಿಕ್ಕ ರಾಷ್ಟ್ರಗಳ ಹೆಸರುಗಳನ್ನು ಸಂಪೂರ್ಣವಾಗಿ ನೋಡಬಹುದು, ಆದರೆ ಇಸ್ರೇಲ್‌ ಹೆಸರನ್ನು ಕೈಬಿಟ್ಟಿದೆ. ಚೀನಾದ ಕಂಪನಿಗಳು ಈ ಕ್ರಮದ ಹಿಂದೆ ಯಾವುದೇ ವಿವರಣೆಯನ್ನು ನೀಡಿಲ್ಲ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಸ್ವತಃ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಿದ್ದು, ”ಅಮೆರಿಕವು ಗಾಜಾ ಇತಿಹಾಸದ ಬಗ್ಗೆ ತಪ್ಪಾಗಿ ಚಿತ್ರಿಸಿದ್ದಕ್ಕಾಗಿ ಚೀನಾದ ಮಾಧ್ಯಮಗಳು ಛೀಮಾರಿ ಹಾಕುತ್ತಿವೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಜನರು ಅನುಭವಿಸಿದ ಅನ್ಯಾಯ ಮುಂದುವರಿಯಬಾರದು ಎಂದು ಸೌದಿ ಅರೇಬಿಯಾದಲ್ಲಿ ಸಹಕಾರ ಮತ್ತು ಅಭಿವೃದ್ಧಿಗಾಗಿ ರಿಯಾದ್-ಗಲ್ಫ್-ಚೀನೀ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಚೀನಾ ಅಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...