Homeಮುಖಪುಟಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

ಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

- Advertisement -
- Advertisement -

ಚೀನಾ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದಕ್ಕೆ 2020ರಲ್ಲಿ ಬಂಧಿಸಲ್ಪಟ್ಟಿದ್ದ ಪತ್ರಕರ್ತೆ ಝಾಂಗ್ ಝಾನ್ ಅವರು ನಾಲ್ಕು ವರ್ಷದ ಸೆರೆವಾಸದ ಬಳಿಕ ಬಿಡುಗಡೆಗೊಂಡಿರುವುದಾಗಿ ವರದಿಯಾಗಿದೆ.

ಆದರೆ, ಝಾಂಗ್ ಝಾನ್ ಇನ್ನೂ ಸರ್ಕಾರದ ಕಣ್ಗಾವಲಿನಲ್ಲಿದ್ದು, ಅವರ ಸ್ವಾತಂತ್ರ್ಯ ಸೀಮಿತವಾಗಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ.

2020ರ ಫೆಬ್ರವರಿಯಲ್ಲಿ ಕೋವಿಡ್-19 ಸೋಂಕಿನ ಹಾಟ್‌ ಸ್ಪಾಟ್ ಎನಿಸಿಕೊಂಡಿದ್ದ ಚೀನಾದ ವುಹಾನ್ ನಗರಕ್ಕೆ ತೆರಳಿದ್ದ ಪತ್ರಕರ್ತೆ ಝಾಂಗ್, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದರು. ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಸರ್ಕಾರಿ ಅಧಿಕಾರಿಗಳೊಂದಿಗೆ ಜಗಳವಾಡಿ ಸಮಸ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಝಾಂಗ್ ಅವರನ್ನು 2020ರ ಮೇ ತಿಂಗಳಲ್ಲಿ ಬಂಧಿಸಿ 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಝಾಂಗ್ ಝಾನ್ ಅವರು 2024ರ ಮೇ 13ರಂದು ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಅವರು ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ, ಆಕೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿಲ್ಲ. ಹಾಗಾಗಿ, ಆಕೆ ಇನ್ನೂ ಬಂಧನಲ್ಲಿರಬಹುದಾ? ಎಂಬ ಕಳವಳವನ್ನು ಮಾನವ ಹಕ್ಕುಗಳ ಸಂಸ್ಥೆ ವ್ಯಕ್ತಪಡಿಸಿದೆ.

“ಝಾಂಗ್ ಅವರ ಸಣ್ಣ ವಿಡಿಯೋ ತುಣುಕೊಂಡು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬುಧವಾರ ಹಂಚಿಕೊಂಡಿದೆ. ಅದರಲ್ಲಿ ಆಕೆ, “ಪೊಲೀಸರು ನನ್ನನ್ನು ಮೇ 13ರಂದು ಬೆಳಿಗ್ಗೆ ಐದು ಗಂಟೆಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಶಾಂಘೈನಲ್ಲಿರುವ ನನ್ನ ಅಣ್ಣನ ಮನೆಗೆ ಕಳುಹಿಸಿದ್ದಾರೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಮೃದುವಾದ ಧ್ವನಿಯಲ್ಲಿ ಹೇಳಿರುವುದು ಇದೆ. ಆ ವಿಡಿಯೋ ಆಧರಿಸಿ ಆಕೆ ಬಿಡುಗಡೆಯಾಗಿರುವುದನ್ನು ಖಚಿತಪಡಿಸಬಹುದು ಎಂದು ವರದಿಗಳು ತಿಳಿಸಿವೆ.

ಪತ್ರಕರ್ತೆ ಝಾಂಗ್ ಝಾನ್ ಅವರನ್ನು 2020ರಲ್ಲಿ ಬಂಧಿಸಿದಾಗ, ಅದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಶ್ನಿಸಿದ ಪತ್ರಕರ್ತೆಯನ್ನು ಬಂಧಿಸಿದ ಚೀನಾ ಸರ್ಕಾರದ ವಿರುದ್ದ ಸರ್ವಾಧಿಕಾರದ ಆರೋಪ ಕೇಳಿ ಬಂದಿತ್ತು. ಜಾಗತಿಕ ಸಂಸ್ಥೆಗಳು ಚೀನಾದ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಅನೇಕ ದೇಶಗಳಿಂದ ಝಾಂಗ್ ಝಾನ್ ಅವರಿಗೆ ಬೆಂಬಲ ವ್ಯಕ್ತವಾಗಿತ್ತು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...