Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...