Homeಮುಖಪುಟಲಡಾಖ್‌ನಲ್ಲಿ ಚೀನಾ ಮಿಲಿಟರಿ ಪ್ರವೇಶಿಸಿದೆ: ರಾಹುಲ್ ಹೇಳಿದ್ದು ನಿಜವಾಗಿದೆ ಎಂದ ಸಂಜಯ್ ರಾವುತ್

ಲಡಾಖ್‌ನಲ್ಲಿ ಚೀನಾ ಮಿಲಿಟರಿ ಪ್ರವೇಶಿಸಿದೆ: ರಾಹುಲ್ ಹೇಳಿದ್ದು ನಿಜವಾಗಿದೆ ಎಂದ ಸಂಜಯ್ ರಾವುತ್

- Advertisement -
- Advertisement -

ಗಡಿವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಖ್ಯಾತೆ ತೆಗೆದಿರುವ ಚೀನಾ, ವಿವಾದಾತ್ಮಕ ಪ್ರದೇಶವಾದ ಅರುಣಾಚಲ ಪ್ರದೇಶ ಹಾಗೂ ಅಕ್ಸಾಯ್ ಚಿನ್ ಪ್ರದೇಶ ತನ್ನ ಭೂಭಾಗ ಎಂದು ಹೇಳಿಕೊಂಡಿದೆ. ಈ ಬಗ್ಗೆ ಶಿವಸೇನೆ (ಯುಬಿಟ) ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವುತ್, ”ಲಡಾಖ್‌ನ ಪ್ಯಾಂಗಾಂಗ್ ಕಣಿವೆಗೆ ಚೀನಾ ಮಿಲಿಟರಿ ಪ್ರವೇಶಿಸಿದೆ ಎಂದು ಲಡಾಖ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ನಿಜವಾಗಿದೆ. ಕೇಂದ್ರ ಸರ್ಕಾರಕ್ಕೆ ಧೈರ್ಯವಿದ್ದರೆ ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ” ಎಂದು ಮಂಗಳವಾರ ಸವಾಲು ಹಾಕಿದ್ದಾರೆ.

”ನಮ್ಮ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಬ್ರಿಕ್ಸ್ ಶೃಂಗಸಭೆ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದ್ದರು. ಶಾಂತಿ ಕಾಪಾಡುವ ಬಗ್ಗೆ, ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ ಎಂದು ವರದಿಯಾಗಿತ್ತು. ಆದರೆ, ಆ ಭೇಟಿ ಬಳಿಕವೂ ಚೀನಾ ಈ ನಕ್ಷೆ ಬಿಡುಗಡೆ ಮಾಡಿದೆ. ಲಡಾಖ್‌ನ ಹ್ಯಾಂಗಾಂಗ್ ಕಣಿವೆಯನ್ನು ಚೀನಾ ಪ್ರವೇಶಿಸಿದೆ ಎಂದು ರಾಹುಲ್ ಗಾಂಧಿ ಹೇಳಿರುವುದು ನಿಜವೆಂದು ಸಾಬೀತಾಗಿದೆ. ಚೀನಾ ಅರುಣಾಚಲವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಿಮಗೆ (ಕೇಂದ್ರ ಸರ್ಕಾರ) ಧೈರ್ಯವಿದ್ದರೆ ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ” ಎಂದು ರಾವುತ್ ಒತ್ತಾಯಿಸಿದ್ದಾರೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಿರ್ದೇಶನದಂತೆ ನೈಸರ್ಗಿಕ ಸಂಪನ್ಮೂಲ ಸಚಿವಾಲಯವು 2023ರ ಆವೃತ್ತಿಯ ಅಧಿಕೃತ ನಕ್ಷೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಚೀನಾ ಬಿಡುಗಡೆ ಮಾಡಿದ ನಕ್ಷೆಯಲ್ಲಿ ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶವನ್ನು ತೋರಿಸಲಾಗಿದೆ. 1962ರ ಯುದ್ಧದಲ್ಲಿ ಅಕ್ಸಾಯ್ ಚಿನ್ ಭೂಪ್ರದೇಶವನ್ನು ವಶಪಡಿಸಿಕೊಂಡಿದ್ದು, ಅದೂ ತನ್ನ ದೇಶದ ಭಾಗವಾಗಿದೆ ಎಂದು ಚೀನಾ ಹೇಳಿಕೊಂಡಿದೆ. ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಸಹ ಹೊಸ ನಕ್ಷೆಯಲ್ಲಿ ಚೀನಾದ ಭಾಗವೆಂದು ಬಿಂಬಿಸಲಾಗಿದೆ.

ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ ಪಿಂಗ್ ಅವರು ದಕ್ಷಿಣ ಆಫ್ರಿಕಾದ ಜೊಹಾನೆಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. ಗಡಿಯಲ್ಲಿ ಉದ್ವಿಗ್ನತೆ ಶಮನ ಮತ್ತು ಸೇನಾಪಡೆಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿದ್ದರು ಎಂದು ಹೇಳಲಾಗಿತ್ತು. ಆದರೆ ಇದೀಗ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಿರ್ದೇಶನದಂತೆ ನೈಸರ್ಗಿಕ ಸಂಪನ್ಮೂಲ ಸಚಿವಾಲಯವು 2023ರ ಆವೃತ್ತಿಯ ಅಧಿಕೃತ ನಕ್ಷೆಯ ಮೂಲಕ ಖ್ಯಾತೆ ತೆಗೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...