Homeಮುಖಪುಟಗಡಿಯಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ

ಗಡಿಯಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ

- Advertisement -
- Advertisement -

ಅರುಣಾಚಲ ಪ್ರದೇಶದಿಂದ ಕಾಣೆಯಾಗಿ ಚೀನಾಗೆ ಸೇರಿದ್ದ ಭೂ ಪ್ರದೇಶದಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕ ಮಿರಾಮ್ ತಾರೋಮ್‌ರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಗುರುವಾರ ತಿಳಿಸಿದ್ದಾರೆ.

17 ವರ್ಷದ ಮಿರಾಮ್ ತಾರೋನ್‌ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಸಚಿವ ಕಿರಣ್ ರಿಜಿಜು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ತಮ್ಮ ಕಡೆ ಇದ್ದ ಭಾರತೀಯ ಪ್ರಜೆಯನ್ನು ಹಸ್ತಾಂತರಿಸುವಂತೆ ಭಾರತೀಯ ಸೇನೆಯ ಮನವಿಗೆ ಚೀನಾ ಸೇನೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ನಿನ್ನೆ ತಿಳಿಸಿದ್ದರು.

ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಸಿಯಾಂಗ್ ಜಿಲ್ಲೆಯ ಝಿಡೊ ಗ್ರಾಮದ ಯುವಕ, ಜನವರಿ 18 ರಂದು ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿಯಿಂದ ನಾಪತ್ತೆಯಾಗಿದ್ದರು. ಕಾಣೆಯಾಗಿದ್ದ ಯುವಕ LAC ಉದ್ದಕ್ಕೂ ದೂರದ ಪ್ರದೇಶಗಳಿಗೆ ಆಗಾಗ್ಗೆ ಭೇಟಿ ನೀಡುವ ಸ್ಥಳೀಯ ಬೇಟೆ ನಡೆಸುವ ಗುಂಪಿನ ಭಾಗವಾಗಿದ್ದರು. ತ್ಸಾಂಗ್ಪೋ ನದಿ ಭಾರತಕ್ಕೆ ಪ್ರವೇಶಿಸುವ ಬಳಿ ಚೀನಾದ ಸೇನೆ ಆತನನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿತ್ತು.

ಸೆಪ್ಟೆಂಬರ್ 2020 ರಲ್ಲಿ, ಚೀನಾ ಸೇನೆ ಅರುಣಾಚಲ ಪ್ರದೇಶದ ಅಪ್ಪರ್ ಸುಬಾನ್ಸಿರಿ ಜಿಲ್ಲೆಯಿಂದ ಐದು ಯುವಕರನ್ನು ಅಪಹರಿಸಿ ಸುಮಾರು ಒಂದು ವಾರದ ನಂತರ ಬಿಡುಗಡೆ ಮಾಡಿತ್ತು.


ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...