Homeಮುಖಪುಟಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಯುವತಿಯ ಬಂಧನ..

ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಯುವತಿಯ ಬಂಧನ..

- Advertisement -
- Advertisement -

ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ 23 ವರ್ಷದ ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತಂಡವು ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಿದ್ದಾರೆ.

ಬಂಧನದ ವಿರುದ್ಧ ರಕ್ಷಣೆಗಾಗಿ ಕಾನೂನು ವಿದ್ಯಾರ್ಥಿ ಸ್ಥಳೀಯ ನ್ಯಾಯಾಲಯವನ್ನು ಕೋರಿದ್ದರೂ ತಕ್ಷಣದ ಪರಿಹಾರ ಸಿಗಲಿಲ್ಲ. ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆಯನ್ನು ಮೂಂದೂಡಿತ್ತು.

”ಮಹಿಳೆಯನ್ನು ತನ್ನ ನಿವಾಸದಿಂದ ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಾವು ನಂತರ ಅವಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತೇವೆ ಮತ್ತು ಆಕೆಯನ್ನು ವಶಕ್ಕೆ ಪಡೆಯುತ್ತೇವೆ ”ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್ ನವೀನ್ ಅರೋರಾ ತಿಳಿಸಿದ್ದಾರೆ.

ಕಳೆದ ವಾರ, ಬಿಜೆಪಿ ನಾಯಕನ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಮಾಡಿದ ಕಾನೂನು ವಿದ್ಯಾರ್ಥಿಯ ದೂರಿನ ಮೇರೆಗೆ ವಿಶೇಷ ತನಿಖಾ ತಂಡ ಚಿನ್ಮಯಾನಂದ್ ಅವರನ್ನು ಬಂಧಿಸಿತ್ತು. ಈಗ ಚಿನ್ಮಯಾನಂದ್ ನೀಡಿದ ದೂರಿನ ಮೇಲೆ ಆಕೆಯನ್ನು ಬಂಧಿಸಿರುವುದು ಸೇಡಿನ ಕ್ರಮ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ಆರೋಪದಲ್ಲಿ ಬಿಜೆಪಿ ಮುಖಂಡ ಚಿನ್ಮಯಾನಂದ್ ಬಂಧನ..

ಕಳೆದ ತಿಂಗಳು ಆಗಸ್ಟ್ 24 ರಂದು ಆ ವಿದ್ಯಾರ್ಥಿನಿಯು “ಸಮುದಾಯದ ಹಿರಿಯ ಮುಖಂಡ” ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಕಾಣೆಯಾಗಿದ್ದಳು.

ಚಿನ್ಮಯಾನಂದ್ ಅವರ ಆಶ್ರಮ ನಡೆಸುತ್ತಿರುವ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಕಾನೂನು ವಿದ್ಯಾರ್ಥಿನಿಯು, ಒಂದು ವರ್ಷದಿಂದ ಅತ್ಯಾಚಾರ ಮತ್ತು ದೈಹಿಕವಾಗಿ ಶೋಷಣೆಗೆ ಒಳಗಾಗಿದ್ದೆ ಎಂದು ಆರೋಪಿಸಿದ್ದಾಳೆ.

ಆಕೆಯ ವಿರುದ್ಧ ಸುಲಿಗೆ ಪ್ರಕರಣವನ್ನು ದಾಖಲಿಸಿರುವ ಚಿನ್ಮಯಾನಂದ್ ಪರ ವಕೀಲ ಓಂ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾನೂನು ವಿದ್ಯಾರ್ಥಿ ತನ್ನ ಮೂವರು ಸ್ನೇಹಿತರಾದ ಸಚಿನ್ ಸೆಂಗಾರ್, ಶಿವಂ ಸಿಂಗ್ ಮತ್ತು ವಿಕಾರಂ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಚಿನ್ಮಯಾನಂದ್ ಬಳಿ 5 ಕೋಟಿ ನೀಡುವಂತೆ ಒತ್ತಾಯ ಹಾಕಿದ್ದಳು ಎಂದು ಆರೋಪಿಸಿದ್ದಾರೆ.

ಚಿನ್ಮಯಾನಂದ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಲು ತನ್ನ ವಿರುದ್ಧ ಸುಲಿಗೆ ಪ್ರಕರಣವನ್ನು ಹಾಕಲಾಗಿದೆ ಎಂದು ಕಾನೂನು ವಿದ್ಯಾರ್ಥಿನಿ ಹೇಳಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...