Homeಮುಖಪುಟಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿರುವ 23 ವರ್ಷದ ಕಾನೂನು ವಿದ್ಯಾರ್ಥಿನಿಗೆ ಸೋಮವಾರ ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

75% ಹಾಜರಾತಿಯ ಕಡ್ಡಾಯ ನಿಯಮವನ್ನು ವಿದ್ಯಾರ್ಥಿನಿಯು ಪೂರೈಸಲಿಲ್ಲ ಎಂದು ಉತ್ತರ ಪ್ರದೇಶದ ಬರೇಲಿಯ ವಿಶ್ವವಿದ್ಯಾಲಯವು ತಿಳಿಸಿದೆ. ಮಂಗಳವಾರದಿಂದ ಪ್ರಾರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ಆದೇಶವನ್ನು ಸಲ್ಲಿಸುವಂತೆ ಆ ವಿದ್ಯಾರ್ಥಿನಿಗೆ ಸೂಚಿಸಿದೆ.

ಚಿನ್ಮಯಾನಂದ್‌ನಿಂದ ಬ್ಲ್ಯಾಕ್‌ಮೇಲ್ ಮಾಡಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿರುವ ಆರೋಪಕ್ಕಾಗಿ ಆಕೆ ಮತ್ತು  ಇತರ ಮೂವರನ್ನು ಶಹಜಹಾನಪುರ ಜೈಲಿನಲ್ಲಿ ಇರಿಸಲಾಗಿದೆ. ಅವರ ವಕೀಲ ಕಲ್ವಿಂದರ್ ಸಿಂಗ್ ಅವರು ವಿಶ್ವವಿದ್ಯಾಲಯದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ವಿಶ್ವವಿದ್ಯಾಲಯವು ಸೋಮವಾರ ಆಕೆಗೆ ತನ್ನ ಮೊದಲ ಸೆಮಿಸ್ಟರ್‌ನಲ್ಲಿ ಬಾಕಿ ಬ್ಯಾಕ್ ಪೇಪರ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ ಎಂದು ರಿಜಿಸ್ಟ್ರಾರ್ ಸುನೀತಾ ಪಾಂಡೆ ಹೇಳಿದ್ದಾರೆ. “ಆದರೆ ನಾಳೆ [ಮಂಗಳವಾರ] ರಿಂದ ಪ್ರಾರಂಭವಾಗುತ್ತಿರುವ ತನ್ನ LLM ನ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಳನ್ನು ಅನುಮತಿಸಲಾಗುವುದಿಲ್ಲ. ಆಕೆಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು, ಮತ್ತು ನಾವು ಆ ನಿರ್ದೇಶನವನ್ನು ಪಾಲಿಸಿದ್ದೇವೆ. ಅಗತ್ಯವಿರುವ 75% ಹಾಜರಾತಿಯನ್ನು ಅವಳು ಪೂರೈಸದಿದ್ದರೂ ಸಹ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ನಿರ್ದೇಶನ ನೀಡಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಉತ್ತರ ಪ್ರದೇಶ ಸರ್ಕಾರವು ಆಕೆ ಮತ್ತು ಆಕೆಯ ಸಹೋದರನನ್ನು ಎಸ್‌ಎಸ್ ಕಾನೂನು ಕಾಲೇಜಿನಿಂದ ಬರೇಲಿಯ ಮಹಾತ್ಮ ಜ್ಯೋತಿಬಾ ಫುಲೆ ರೋಹಿಲ್‌ಖಂಡ್ ವಿಶ್ವವಿದ್ಯಾಲಯಕ್ಕೆ ಮತ್ತು ಶ್ರೀಜಿ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಮತ್ತು ವೊಕೇಶನಲ್ ಸ್ಟಡೀಸ್‌ಗೆ ಕ್ರಮವಾಗಿ ವರ್ಗಾಯಿಸಲು ವ್ಯವಸ್ಥೆ ಮಾಡಿತು. ಶಿಕ್ಷಣವು ಆಕೆಯ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಉನ್ನತ ನ್ಯಾಯಾಲಯವು ಭಾವಿಸಿತ್ತು ಮತ್ತು ಅದಕ್ಕಾಗಿ ಅವರು ಸ್ಥಳಾಂತರಗೊಂಡ ಆಯಾ ಕಾನೂನು ಕೋರ್ಸ್‌ಗಳಿಗೆ  ಆಸನಗಳನ್ನು ಹೆಚ್ಚಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾವನ್ನು ಕೋರಿತ್ತು.

ನ್ಯಾಯಾಲಯದ ಆದೇಶದ ನಂತರ ಮತ್ತು ಹಾಸ್ಟೆಲ್‌ನಲ್ಲಿ ಒಂದು ಕೋಣೆಯನ್ನು ಮಂಜೂರು ಮಾಡಿದ ನಂತರ ಆಕೆಗೆ ಅಕ್ಟೋಬರ್‌ನಲ್ಲಿ ಪ್ರವೇಶ ನೀಡಲಾಯಿತು ಎಂದು ಕಾನೂನು ವಿದ್ಯಾರ್ಥಿನಿಯ ಸಹೋದರ ಹೇಳಿದ್ದಾರೆ. “ನನ್ನ ಸಹೋದರಿ ನ್ಯಾಯಾಂಗ ಬಂಧನದಲ್ಲಿರುವುದರಿಂದ, ಅವಳು ಯಾವುದೇ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...