Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

- Advertisement -
- Advertisement -

ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮಂಗಳವಾರ (ಜು.1) ಬೆಳಿಗ್ಗೆ ಆದೇಶಿಸಿದೆ.

ಜೂನ್ 4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ 11 ಜನರು ಸಾವನ್ನಪ್ಪಿದ ಕಾಲ್ತುಳಿತ ದುರಂತಕ್ಕೆ ಹೊಣೆಮಾಡಿ ಸರ್ಕಾರ ಅಮಾನತು ಮಾಡಿದ ಪೊಲೀಸ್ ಅಧಿಕಾರಿಗಳಲ್ಲಿ ವಿಕಾಸ್ ಕುಮಾರ್ ಕೂಡ ಒಬ್ಬರು.

ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತಾ ಉಸ್ತುವಾರಿ ವಹಿಸಿದ್ದ ವಿಕಾಸ್ ಕುಮಾರ್ ಅವರನ್ನು ಬೇಜವ್ದಾರಿಯ ಕಾರಣ ನೀಡಿ ಸರ್ಕಾರ ಅಮಾನತು ಮಾಡಿತ್ತು.

ಇದನ್ನು ಪ್ರಶ್ನಿಸಿ ಅವರು ಸಿಎಟಿ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಸರ್ಕಾರದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೆ, ಅವರನ್ನು ಮೂಲಸ್ಥಾನಕ್ಕೆ ಮರು ನೇಮಿಸಲು ಮತ್ತು ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ಸೂಚಿಸಿದೆ.

ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು. ಸಿಎಟಿ ಆದೇಶವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

ವಿಕಾಸ್ ಕುಮಾರ್ ಜೊತೆಗೆ ಕಾಲ್ತುಳಿತ ದುರಂತಕ್ಕೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತ ಡಾ. ಬಿ. ದಯಾನಂದ, ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎ.ಕೆ ಗಿರೀಶ್ ಅವರನ್ನು ಸರ್ಕಾರ ಅಮಾನತು ಮಾಡಿದೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...