Homeಕರ್ನಾಟಕಬೆಂಗಳೂರು: ಸೆ.16ರಂದು ‘ಒಂದು ದೇಶ, ಒಂದು ಚುನಾವಣೆ’ ಸಂವಾದ ಕಾರ್ಯಕ್ರಮ

ಬೆಂಗಳೂರು: ಸೆ.16ರಂದು ‘ಒಂದು ದೇಶ, ಒಂದು ಚುನಾವಣೆ’ ಸಂವಾದ ಕಾರ್ಯಕ್ರಮ

- Advertisement -
- Advertisement -

ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ‘ಒಂದು ದೇಶ, ಒಂದು ಚುನಾವಣೆ’ ಸಂವಾದ ಕಾರ್ಯಕ್ರಮ ಸೆ.16ರಂದು ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯ ಭಾರತೀಯ ವಿದ್ಯಾಭವನ ಕೆ ಆರ್‌ ವಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಒಂದು ದೇಶ, ಒಂದು ಚುನಾವಣೆಯ ಹೂರಣವೇನು? ಅಜೆಂಡಾವೇನು? ಎಂಬುವುದರ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾಮಾಜಿಕ ಚಿಂತಕರು, ಕನ್ನಡ ಪರ ಹೋರಾಟಗಾರರು ಹಾಗೂ ಎಎಪಿಯ ರಾಜ್ಯ ಉಪಾಧ್ಯಕ್ಷರಾದ ಡಾ.ರಮೇಶ್ ಬೆಲ್ಲಂಕೊಂಡ, ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರರಾದ ಶಿವಸುಂದರ್‌, ರಾಜಕೀಯ ವಿಶ್ಲೇಷಕರು, ಚಿಂತಕರಾದ ಎ.ನಾರಾಯಣ, ಖ್ಯಾತನಟ, ರಂಗಕರ್ಮಿ, ಕರ್ನಾಟಕ ರಾಜ್ಯ ಎಎಪಿ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರು, ವಿಜಯಪುರ ಅಕ್ಕಮಹಾದೇವಿ ವಿವಿಯ ನಿವೃತ್ತ ಕುಲಸಚಿವರಾದ ಆರ್‌ ಸುನಂದಮ್ಮ, ಕರ್ನಾಟಕ ರಾಜ್ಯ ಕಾಂಗ್ರೆಸ್‌ ವಕ್ತಾರರಾದ ಸುಧೀರ್ ಕುಮಾರ್‌ ಮುರೊಳ್ಳಿ, ಜೆಡಿಎಸ್‌ ಕರ್ನಾಟಕದ ವಕ್ತಾರರಾದ ಸಿಎಂ ಫೈಜ್‌,  ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.ಕೆ.ಪ್ರಕಾಶ್, ಸಾಮಾಜಿಕ ಕಾರ್ಯಕರ್ತೆ, ಬರಹಗಾರ್ತಿ ಯುಟಿ ಫರ್ಜಾನ, ಸಿನಿಮಾ ನಟಿ, ರಂಗಭೂಮಿ ಕಲಾವಿದೆ ಸುಷ್ಮಾವೀರ್‌, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್‌, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾದ ಮಂಜುನಾಥ್ ಅದ್ದೆ, ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್‌,  ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಾದ  ಚೇತನ್‌ ಜೀರಾಳ್‌ ಸೇರಿ ಹಲವು ಗಣ್ಯರು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಒಂದು ದೇಶ, ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಸಮಿತಿಯನ್ನು ರಚಿಸಿದೆ. ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗುತ್ತಿದೆ. ಅಧಿವೇಶನದಲ್ಲಿ ಸರ್ಕಾರವು ಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತದೆ.

ಇದನ್ನು ಓದಿ; ಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...