Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...