ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಈ ಮೂಲಕ, ಪ್ರಕರಣದ 11 ಆರೋಪಿಗಳೂ ಜೈಲಿನಿಂದ ಹೊರಬಂದಿದ್ದಾರೆ.
ಮಾರು ನಾಲ್ಕು ತಿಂಗಳ ಜೈಲು ವಾಸದ ನಂತರ ಈಗ ಎಲ್ಲ ಆರು ಮಂದಿ ಜಾಮೀನಿನ ಮೇಲೆ ಹೊರ ಬರಲಿದ್ದಾರೆ. ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಈಗಾಗಲೇ ಕಳೆದ ತಿಂಗಳು ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಬಳ್ಳಾರಿ ಜೈಲಿನಿಂದ ಹೊರಬಂದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮಧ್ಯಂತರ ಜಾಮೀನಿನ ಅವಧಿ ಕೂಡ ಮುಗಿಯುವ ಹಂತದಲ್ಲಿತ್ತು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ.
ಮಧ್ಯಂತರ ಜಾಮೀನಿಗಾಗಿ ದರ್ಶನ್ ಪರ ವಾದ ಮಂಡಿಸಿದ್ದ ಖ್ಯಾತ ಕ್ರಿಮಿನಲ್ ಲಾಯರ್ ಸಿವಿ ನಾಗೇಶ್, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ, ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು.
ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಇದನ್ನೂ ಓದಿ; ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?


