Homeಕರ್ನಾಟಕಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನ : ಅನುಮತಿ ಕೋರಿ ಹೊಸದಾಗಿ ಅರ್ಜಿ ‌ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನ : ಅನುಮತಿ ಕೋರಿ ಹೊಸದಾಗಿ ಅರ್ಜಿ ‌ಸಲ್ಲಿಸಲು ಹೈಕೋರ್ಟ್ ನಿರ್ದೇಶನ

- Advertisement -
- Advertisement -

ನವೆಂಬರ್ 2ರಂದು ಚಿತ್ತಾಪುರ ಪಟ್ಟಣದಲ್ಲಿ ಶಾಂತಿಯುತವಾಗಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಕೋರಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಕಲಬುರಗಿಯ ಆರ್‌ಎಸ್‌ಎಸ್ ಸಂಚಾಲಕ ಅಶೋಕ್ ಪಾಟೀಲ್ ಅವರಿಗೆ ಹೈಕೋರ್ಟ್‌ನ ಕಲಬುರಗಿ ಪೀಠ ಭಾನುವಾರ (ಅ.19) ನಿರ್ದೇಶಿಸಿದೆ.

ಇಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಚಿತ್ತಾಪುರ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಪೀಠ, ಮಧ್ಯಂತರ ಆದೇಶ ನೀಡಿದೆ.

ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸುವ ಸಮಯದಲ್ಲೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ಕೋರಿದ್ದಾರೆ. ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೇಳಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ಪೊಲೀಸ್‌ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ಅನುಮತಿ ನಿರಾಕರಿಸುವ ಪತ್ರದಲ್ಲಿ ತಹಶೀಲ್ದಾರ್ ಹೇಳಿದ್ದರು.

ಇಂದು ವಿಚಾರಣೆ ವೇಳೆ, ಬೇರೆ ದಿನದಂದು ಪಥಸಂಚಲನ ಆಯೋಜಿಸಲು ಸಾಧ್ಯವೇ? ಎಂದು ನ್ಯಾಯಮೂರ್ತಿ ಎಂ. ಎಸ್ ಕಮಲ್ ಅವರ ಏಕಸದಸ್ಯ ಪೀಠವು ಅರ್ಜಿದಾರರನ್ನು ಕೇಳಿದೆ. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್, ನವೆಂಬರ್ 2ರಂದು ಆಯೋಜಿಸಬಹುದು ಎಂದಿದ್ದಾರೆ.

ಅರ್ಜಿದಾರರಿಗೆ ಕಾರ್ಯಕ್ರಮ ನಡೆಸಲು ಗೊತ್ತುಪಡಿಸಿದ ಸ್ಥಳವನ್ನು ಒದಗಿಸುವುದನ್ನು ರಾಜ್ಯ ಸರ್ಕಾರ ಖಚಿತಪಡಿಸುತ್ತದೆ ಎಂದು ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿಳಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರ್‌ಎಸ್ಎಸ್ ನ.2ರಂದು ಪಥಸಂಚಲನ ಆಯೋಜಿಸಲು ನಿಗದಿಪಡಿಸಲಾಗಿದೆ. ಅದಕ್ಕೆ ಅನುಮತಿ ನೀಡಲು ರೂಟ್ ಮ್ಯಾಪ್ ಹಾಗೂ ತಹಶೀಲ್ದಾರ್ ಕೇಳಿದ್ದ ವಿವರಣೆಗಳೊಂದಿಗೆ ಹೊಸದಾಗಿ ಅರ್ಜಿದಾರರು ಅರ್ಜಿ ಸಲ್ಲಿಸಬೇಕು. ಅದನ್ನು ಕಲಬುರಗಿ ಜಿಲ್ಲಾಧಿಕಾರಿ ಪರಿಗಣಿಸಬೇಕು. ಈ ಕುರಿತ ವರದಿಯನ್ನು ಅ.24ರ ಮಧ್ಯಾಹ್ನ 2.30ಕ್ಕೆ ಸಲ್ಲಿಸಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.

ಆರ್‌ಎಸ್‌ಎಸ್‌ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...