Homeಕರ್ನಾಟಕಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯಲಿವೆ ಎಂಬ ನಿರ್ಧಾರವನ್ನು ವಿದ್ಯಾರ್ಥಿಗಳನ್ನು ಒಳಗೊಳ್ಳದೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದಾಗಿ ಮಾರ್ಚ್‌ನಲ್ಲಿ ಮುಂದೂಡಲ್ಪಟ್ಟ ಸೆಮಿಸ್ಟರ್ ನ ಅಂತಿಮ ಪರೀಕ್ಷೆಗಳನ್ನು ಜುಲೈ 13 ರಂದು ನಡೆಸಬೇಕು ಎನ್ನುವ ಕ್ರೈಸ್ಟ್ ವಿಶ್ವವಿದ್ಯಾನಿಲಯದ ನಿರ್ಧಾರವನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯಲಿವೆ ಎಂಬ ನಿರ್ಧಾರವನ್ನು ವಿದ್ಯಾರ್ಥಿಗಳನ್ನು ಒಳಗೊಳ್ಳದೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಾಂಕ್ರಾಮಿಕ ರೋಗದ ನಡುವೆ ಮತ್ತು ಲಾಕ್‌ಡೌನ್ ಮಧ್ಯದಲ್ಲಿ, ಪೂರ್ವಭಾವಿ ರಜೆ ಇಲ್ಲದೆ, ಒಂದು ದಿನದಲ್ಲಿ ಆನ್‌ಲೈನ್ ಪರೀಕ್ಷೆ ಅಥವಾ ಕಾಲೇಜುಗಳು ಮತ್ತೆ ತೆರೆದಾಗ  ಭೌತಿಕ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಂದನ್ನು ಆಯ್ಕೆ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳನ್ನು ಬರೆಯಬೇಕಾಗಿದೆ ಮತ್ತು ಇತರ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬಹುದು ಎಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಆದೇಶವನ್ನು ಉಲ್ಲೇಖಿಸಿ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ವಿಶ್ವವಿದ್ಯಾಲಯಕ್ಕೆ ಮನವಿ ನೀಡಿದರು.

ಹಿಂದಿನ ಸೆಮಿಸ್ಟರ್‌ನಲ್ಲಿ ಅವರ ಆಂತರಿಕ ಅಂಕಗಳು ಮತ್ತು ಸಾಧನೆಯ ಆಧಾರದ ಮೇಲೆ ಇತರ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದೆ ಎಂದು ಹೇಳಿದೆ. “ಕ್ರೈಸ್ಟ್ (ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಗಿದೆ) ಯುಜಿಸಿ ನಿಯಮಗಳು ಮತ್ತು ಮಾರ್ಗಸೂಚಿಗಳಿಂದ ನಿರ್ದೇಶಿಸಲ್ಪಡುತ್ತದೆ.

ಯುಜಿಸಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ವಿಶ್ವವಿದ್ಯಾಲಯದ ನಿರ್ಧಾರದ ಪ್ರಕಾರ 2020 ರ ಜುಲೈ 13 ರಿಂದ ನಿಗದಿತ ಪರೀಕ್ಷೆಗಳನ್ನು ಘೋಷಿಸಿದ ವೇಳಾಪಟ್ಟಿಯ ಪ್ರಕಾರ ನಡೆಸಲಾಗುವುದು” ಎಂದು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ ಮಧ್ಯಭಾಗದಲ್ಲಿ, ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ಆರಿಸಿಕೊಳ್ಳಬೇಕು ಅಥವಾ ವಿಶ್ವವಿದ್ಯಾಲಯ ತೆರೆದಾಗ ಭೌತಿಕ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿತು. ಆದರೆ ಅವರಿಗೆ ಯಾವುದೇ ಪೂರ್ವಸಿದ್ಧತಾ ರಜೆ ದೊರೆತಿರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ಆರಿಸಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ವಿದ್ಯಾರ್ಥಿ ಅಜಯ್ ಹೇಳಿದ್ದಾರೆ.

ಆನ್‌ಲೈನ್ ಪರೀಕ್ಷೆಗಳಿಗೆ ಹೊಸ ಸರ್ವರ್ ಸ್ಥಾಪಿಸಲು ಈಗಾಗಲೇ ಪಾವತಿಸಿರುವ ಪರೀಕ್ಷಾ ಶುಲ್ಕವನ್ನು ಹೊರತುಪಡಿಸಿ ವಿಶ್ವವಿದ್ಯಾಲಯವು 500 ರೂ ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ವಿದ್ಯಾರ್ಥಿಗಳು The news minute ಗೆ ತಿಳಿಸಿದ್ದಾರೆ.

ಆದಾಗ್ಯೂ, ಪ್ರತಿ ವಿದ್ಯಾರ್ಥಿಗೆ ಇಂಟರ್ನೆಟ್ ಸಂಪರ್ಕ ಅಥವಾ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾಲಯವು ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

“ನನಗೆ ವೈಫೈ ಸಂಪರ್ಕವನ್ನು ಪಡೆಯಲು ಸಾಧ್ಯವಿಲ್ಲ. ನಾನು ಬಳಸುವ ಮೊಬೈಲ್ ನೆಟ್‌ವರ್ಕ್ ನನಗೆ ದಿನಕ್ಕೆ 1 ಜಿಬಿ ಡೇಟಾವನ್ನು ಮಾತ್ರ ಅನುಮತಿಸುತ್ತದೆ. ಆದ್ದರಿಂದ ಪರೀಕ್ಷೆಗೆ ಹಾಜರಾಗಲು, ನಾನು ಪ್ರತಿದಿನ 2 ಜಿಬಿ ರೀಚಾರ್ಜ್ ಖರೀದಿಸಬೇಕಾಗುತ್ತದೆ. ನನ್ನ ಮನೆಯೊಳಗೆ ನನಗೆ ಇಂಟರ್ನೆಟ್ ಸಿಗುವುದಿಲ್ಲ. ಆದ್ದರಿಂದ ನಾನು ಬಾಲ್ಕನಿಯಲ್ಲಿ ಅಥವಾ ನನ್ನ ಟೆರೇಸ್‌ನಲ್ಲಿ ಕುಳಿತುಕೊಳ್ಳಬೇಕು. ಪರೀಕ್ಷೆ ತೆಗೆದುಕೊಂಡ ನಂತರ 2 ನಿಮಿಷಗಳವರೆಗೆ ಉತ್ತರಿಸಲಿಲ್ಲವಾದರೆ, ನಕಲು ಕಾರಣವೆಂದು ನನ್ನ ಫಲಿತಾಂಶವನ್ನು ತಡೆಹಿಡಿಯಲಾಗುತ್ತದೆ ಎಂದು ಕ್ರೈಸ್ಟ್ ವಿವಿಯ ಇನ್ನೊಬ್ಬ ವಿದ್ಯಾರ್ಥಿ ಹೇಳಿದ್ದಾರೆ.

ಜೂನ್ 3 ರಂದು ಹೊಸ ಸೆಮಿಸ್ಟರ್‌ಗೆ ತರಗತಿಗಳು ಪ್ರಾರಂಭವಾದಾಗ, ಮಳೆಯಿಂದಾಗಿ ಅವರ ಇಂಟರ್ನೆಟ್ ಸಂಪರ್ಕಕ್ಕೆ ಅಡ್ಡಿಯುಂಟಾಗಿ ಆ ತರಗತಿಯ ಹಾಜರಾತಿಯನ್ನು ಕಳೆದುಕೊಂಡರು ಎಂದು ಅವರು ಹೇಳುತ್ತಾರೆ.

“ನಾವು ಅಗತ್ಯ ನೋಟ್ಸ್‌ಗಳನ್ನು ಹೊಂದಿಲ್ಲ. ವೈಯಕ್ತಿಕವಾಗಿ, ನಾನು ಪಿಜಿಯಲ್ಲಿ ವಾಸಿಸುತ್ತಿದ್ದೇನೆ, ನನ್ನ ನೋಟ್ಸ್‌ಗಳನ್ನು ಪಿಜಿಯಲ್ಲಿ ಬಿಟ್ಟುಬಿಟ್ಟಿದ್ದೇನೆ ಆದರೆ ಈಗ ಸುಲಭವಾಗಿ ಲಭ್ಯವಿಲ್ಲದ ಆನ್‌ಲೈನ್ ವಸ್ತುಗಳನ್ನು ಹುಡುಕುತ್ತಿದ್ದೇನೆ. ಇದು ನನ್ನ ವಿಷಯ. ಈ ರೀತಿಯಿರುವ, ಕಲಿಕಾ ಸಾಮಗ್ರಿಗಳನ್ನು ಹಾಸ್ಟೆಲ್ ಮತ್ತು ತಾವು ವಾಸವಿದ್ದ ರೂಂ ಗಳಲ್ಲಿ ಬಿಟ್ಟು ಬಂದಿರುವ ವಿದ್ಯಾರ್ಥಿಗಳ ಸಂಖ್ಯೆ ದೊಡ್ಡದಿದೆ. ಶಿಕ್ಷಕರು ಸಹ ತಮ್ಮದೇ ಆದ ಸಂಪನ್ಮೂಲಗಳನ್ನು ಹೊಂದಿಲ್ಲ ಎಂದು ಕ್ರೈಸ್ಟ್ ವಿವಿಯ ವಿದ್ಯಾರ್ಥಿ ರಾಜೀವ್  ಹೇಳುತ್ತಾರೆ.

ಆಂತರಿಕ ಸಮೀಕ್ಷೆಯಲ್ಲಿ ಭಾಗವಹಿಸಿದ 2,000- ವಿದ್ಯಾರ್ಥಿಗಳಲ್ಲಿ 90 ಪ್ರತಿಶತದಷ್ಟು ಜನರು ಆನ್‌ಲೈನ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಮತ್ತು ಆಂತರಿಕ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಉತ್ತೀರ್ಣಗೊಳಿಸಬೇಕೆಂದು ಮತದಾನ ಮಾಡಿದ್ದಾರೆ.

ಕ್ರೈಸ್ಟ್ ವಿಶ್ವವಿದ್ಯಾಲಯದ ಉಪಕುಲಪತಿ ಫಾದರ್ ಅಬ್ರಹಾಂ 94.47% ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಮತ್ತು ಜುಲೈನಲ್ಲಿ ನಡೆಯಲಿರುವ ಪರೀಕ್ಷೆಯನ್ನು ಬರೆಯಲು ಒಪ್ಪಿದ್ದಾರೆ ಎಂದು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.


ಇದನ್ನೂ ಓದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...