Homeಮುಖಪುಟಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

- Advertisement -
- Advertisement -

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

ಈ ಘಟನೆಯು ಆಗಸ್ಟ್ 14 ರಂದು ಪೂರ್ಬ ಬರ್ಧಮಾನ್ ಜಿಲ್ಲೆಯ ಸಹಾನಗರ ಪಟ್ಟಣದ ಸೇಂಟ್ ಕ್ಲಾರೆಟ್ ಚರ್ಚ್‌ನಲ್ಲಿ ನಡೆದಿದೆ.

ಎಲ್ಲರೂ ಬೆಚ್ಚಿಬೀಳುವಂತೆ, ಹೂಳಲು ಕೆಳಗಿಳಿಸಲಾಗಿದ್ದ ಶವಪೆಟ್ಟಿಗೆಯನ್ನು ಗುಂಪು ಬಲವಂತವಾಗಿ ಮೇಲಕ್ಕೆ ಎಳೆದಿದೆ. ಪಾದ್ರಿ ಫಾದರ್ ಸ್ಯಾಮ್ಯುಯೆಲ್ ಹೆಂಬ್ರೊಮ್ ಇದನ್ನು ವಿರೋಧಿಸಿದಾಗ, ದಫನಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವಂತೆ ಗುಂಪು ಒತ್ತಾಯಿಸಿತು ಎಂದು ವರದಿಯಾಗಿದೆ. “ದಾಖಲೆಗಳನ್ನು ಚರ್ಚ್‌ನಿಂದ ತರಲು ನಮಗೆ ಸ್ವಲ್ಪ ಸಮಯ ಕೊಡಿ ಎಂದು ನಾವು ಕೇಳಿದೆವು. ಆದರೆ ಅವರು ದಫನ್‌ ಮಾಡಲು ಬಿಡಲಿಲ್ಲ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ನಂತರ ಶವವನ್ನು ಬರ್ಧಮಾನ್ ಪಟ್ಟಣದ ಇನ್ನೊಂದು ಸ್ಮಶಾನಕ್ಕೆ ಕೊಂಡೊಯ್ಯಲಾಯಿತು.

ಮೃತ ವ್ಯಕ್ತಿ ಆ ಪ್ರದೇಶಕ್ಕೆ ಸೇರಿದವರಲ್ಲದ ಕಾರಣ ಈ “ಗೊಂದಲ” ಉಂಟಾಗಿದೆ ಎಂದು ಹೇಳುವ ಮೂಲಕ ಪೂರ್ಬ ಬರ್ಧಮಾನ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪುಷ್ಪಾ ಅವರು ಈ ಹಲ್ಲೆ ಆರೋಪವನ್ನು ತಳ್ಳಿಹಾಕಿದ್ದಾರೆ.

ಆಗಸ್ಟ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಸತತ ದಾಳಿ

ಈ ವರ್ಷದ ಮೇ ತಿಂಗಳಲ್ಲಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಧಿಕಾರಕ್ಕೆ ಬಂದಾಗಿನಿಂದ ಧಾರ್ಮಿಕ ದ್ವೇಷದ ಅಪರಾಧಗಳಲ್ಲಿ ಹೆಚ್ಚಳವಾಗಿದೆ.

ಆಗಸ್ಟ್ 23 ಮತ್ತು 30 ರ ನಡುವೆ ಕ್ರಿಶ್ಚಿಯನ್ನರ ವಿರುದ್ಧ ಸತತ ಪ್ರಕರಣಗಳು ವರದಿಯಾಗಿವೆ. ಪ್ರಾರ್ಥನಾ ಸಭೆಗಳಿಗೆ ಅಡೆತಡೆ ಉಂಟುಮಾಡುವುದು. ಪಾದ್ರಿಗಳು ಮತ್ತು ಪ್ರಾರ್ಥನೆ ಸಲ್ಲಿಸುವವರ ಮೇಲೆ ದಾಳಿ ಮಾಡುವುದು ಹಾಗೂ ಬಲವಂತದ ಮತಾಂತರದ ಆರೋಪಗಳು ಈ ಘಟನೆಗಳಲ್ಲಿ ಸೇರಿವೆ.

ಆಗಸ್ಟ್ 23 ರಂದು, ಹೌರಾ ಜಿಲ್ಲೆಯ ಉಲುಬೇರಿಯಾ ಪಟ್ಟಣದ ಮನೆಯೊಂದರಲ್ಲಿ ಭಾನುವಾರದ ಪ್ರಾರ್ಥನೆ ನಡೆಯುತ್ತಿದ್ದಾಗ, ಘೋಷಣೆಗಳನ್ನು ಕೂಗುತ್ತಾ ಬಂದ ಗುಂಪೊಂದು “ಬಲವಂತದ ಮತಾಂತರ” ಆರೋಪ ಮಾಡಿ ಒಳ ನುಗ್ಗಿದೆ. ಅವರು 60 ಜನರಿದ್ದ ಗುಂಪಿನ ಮೇಲೆ ದಾಳಿ ಮಾಡಿ, ಪೀಠೋಪಕರಣಗಳನ್ನು ಹಾನಿಗೊಳಿಸಿದ್ದಾರೆ. “ಅಂದಿನಿಂದ ನಾವು ಯಾವುದೇ ಪ್ರಾರ್ಥನಾ ಸಭೆಯನ್ನು ನಡೆಸಿಲ್” ಎಂದು ಪಾದ್ರಿ ಮಿಥುನ್ ಹಜ್ರಾ ಹೇಳಿದ್ದಾರೆ.

ಎರಡು ದಿನಗಳ ನಂತರ, ಹೌರಾ ಜಿಲ್ಲೆಯ ಘುಸುರಿ ಪಟ್ಟಣದಲ್ಲಿರುವ ‘ಚರ್ಚ್ ಆಫ್ ದಿ ಗ್ರೇಸ್’‌ನಲ್ಲಿ ನಡೆದ ಮತ್ತೊಂದು ಪ್ರಾರ್ಥನಾ ಸಭೆಯ ಮೇಲೆ ಹಿಂದುತ್ವ ಗುಂಪು ದಾಳಿ ನಡೆಸಿದೆ. “ನಾವು ದೂರು ನೀಡಲು ಹೋದಾಗ, ನಮ್ಮನ್ನು ಗಂಟೆಗಟ್ಟಲೆ ಕಾಯಿಸಲಾಯಿತು. ನಂತರ ಚರ್ಚ್ ಮತ್ತು ಧನಸಹಾಯದ ಬಗ್ಗೆ ನಮ್ಮನ್ನೇ ವಿಚಾರಣೆಗೊಳಪಡಿಸಲಾಯಿತು” ಎಂದು ಫಾದರ್ ಸೂರಜ್ ಸರೋಜ ನೋವು ತೋಡಿಕೊಂಡಿದ್ದಾರೆ.

ಮರುದಿನ, ಅಂದರೆ ಆಗಸ್ಟ್ 26 ರಂದು, ದಂಪತಿಗಳು ಬಡವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸೆಳೆಯುತ್ತಿದ್ದಾರೆ ಎಂದು ಆರೋಪಿಸಿ ಸೂತ್ರಧಾರ್ ಎಂಬ ತೀವ್ರ ಬಲಪಂಥೀಯ ನಾಯಕ ಪಾದ್ರಿ ಮತ್ತು ಅವರ ಪತ್ನಿಯ ಮೇಲೆ ದಾಳಿ ನಡೆಸಿದ್ದಾನೆ. ಆರಂಭದಲ್ಲಿ ಹೆದರಿದ ಪಾದ್ರಿ ದೂರು ನೀಡಲು ಭಯಪಟ್ಟಿದ್ದರು. “ನಾನು ಇಮೇಲ್ ಮೂಲಕ ದೂರು ದಾಖಲಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಆಗಸ್ಟ್ 30 ರಂದು, ಇದೇ ರೀತಿಯ ಆರೋಪಗಳ ಮೇಲೆ ಹೌರಾದ ಜಗತ್‌ಬಲ್ಲವಪುರ ಮತ್ತು ಉತ್ತರ 24 ಪರಗಣದ ಹಿಂಗಲ್‌ಗಂಜ್‌ನಲ್ಲಿ ಹಿಂದುತ್ವ ಬೆಂಬಲಿಗರು ಮನೆಗಳಿಗೆ ನುಗ್ಗಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಪ್ರದೀಪ್ತ ಮುಖರ್ಜಿ ಅವರು, ಬಿಜೆಪಿಯು ಭಯದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯು ಮುಸ್ಲಿಮರನ್ನು ವಿದೇಶಿಯರು ಎಂದು ಬಿಂಬಿಸುತ್ತಿದೆ, ಕ್ರಿಶ್ಚಿಯನ್ ಸಮುದಾಯದ ಸದಸ್ಯರನ್ನು ಹೆಚ್ಚಾಗಿ ಗುರಿಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ಮುಸ್ಲಿಮರನ್ನು ವಿದೇಶಿಯರು ಎಂದು ಕರೆಯುವುದು ಮತ್ತು ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮನೆಗಳ ಮೇಲೆ ದಾಳಿ ಮಾಡುವುದು ಈಗ ಅವರ ಕೆಲಸದ ಭಾಗವಾಗಿದೆ” ಎಂದು ಮುಖರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...