Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...