Homeಮುಖಪುಟಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ನೇಮಕಾತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಅ.27) ನಿರಾಕರಿಸಿದೆ.

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಾರದರ್ಶಕ ನೇಮಕಾತಿಗಳಿಗಾಗಿ ನ್ಯಾಯಾಲಯವು ಈ ಹಿಂದೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕೇಂದ್ರವು ಅನುಸರಿಸುತ್ತದೆ ಎಂಬುದರಲ್ಲಿ ‘ಸಂದೇಹಪಡಲು ಯಾವುದೇ ಕಾರಣಗಳಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರ ಮತ್ತು ರಾಜ್ಯ ಮಾಹಿತಿ ಆಯೋಗಗಳ ನೇಮಕಾತಿಗಳಲ್ಲಿ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಕುರಿತು ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ವಕೀಲ ಪ್ರಶಾಂತ್ ಭೂಷಣ್ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ವಿಚಾರಣೆ ನಡೆಸಿದೆ.

ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಈ ಹಿಂದೆ ಆದೇಶಗಳನ್ನು ನೀಡಿದ್ದರೂ, ಸರ್ಕಾರ ಕರ್ತವ್ಯಲೋಪ ಎಸಗಿದೆ ಎಂದು ಭೂಷಣ್ ವಾದಿಸಿದ್ದರು.

“ಜನವರಿ 7ರಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಒಂದು ನಿರ್ದೇಶನ ನೀಡಿತ್ತು. ಅದರಲ್ಲಿ ‘ಶೋಧ ಸಮಿತಿಯ ಸದಸ್ಯರ ಹೆಸರುಗಳು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ’ಯನ್ನು ಬಹಿರಂಗಪಡಿಸುವಂತೆ ಸೂಚಿಸಲಾಗಿತ್ತು. ಮತ್ತಷ್ಟು, ಈ ವಿವರಗಳನ್ನು ‘ಅಂಜಲಿ ಭಾರದ್ವಾಜ್ ಪ್ರಕರಣದಲ್ಲಿ ಈ ನ್ಯಾಯಾಲಯವು ನೀಡಿದ ನಿರ್ದೇಶನಗಳ ಪ್ರಕಾರ ಅಧಿಸೂಚನೆ ಮಾಡಬೇಕು’ ಎಂದು ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಈ ನಿರ್ದೇಶನಗಳನ್ನು ಉಲ್ಲಂಘಿಸಿ ವರ್ತಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, “ಶೋಧನಾ ಸಮಿತಿಯು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಚಿವರನ್ನು ಒಳಗೊಂಡ ಆಯ್ಕೆ ಸಮಿತಿಯು ನೇಮಕಾತಿಗಳನ್ನು ಮಾಡುತ್ತದೆ” ಎಂದು ಪೀಠಕ್ಕೆ ತಿಳಿಸಿದ್ದರು. “ಸಂಪೂರ್ಣ ನೇಮಕಾತಿ ಪ್ರಕ್ರಿಯೆಯು ಎರಡರಿಂದ ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ಭರವಸೆ ನೀಡಿದ್ದರು.

ಇದಕ್ಕೆ, ಹಿಂದಿನ ತೀರ್ಪುಗಳ ಹೊರತಾಗಿಯೂ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಹೆಸರುಗಳು ಮತ್ತು ಅವರನ್ನು ಆಯ್ಕೆ ಮಾಡುವ ಮಾನದಂಡಗಳನ್ನು ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಭೂಷಣ್ ಪ್ರತಿಕ್ರಿಯೆ ನೀಡಿದ್ದರು.

“ನೇಮಕಾತಿ ಮಾಡುವ ಮೊದಲು ಅವರು ಶಾರ್ಟ್‌ಲಿಸ್ಟ್ ಮಾಡುವ ಮಾನದಂಡಗಳನ್ನು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಬೇಕು” ಎಂದು ಭೂಷಣ್ ಆಗ್ರಹಿಸಿದ್ದರು. “ಅರ್ಜಿ ಸಲ್ಲಿಸದ ವ್ಯಕ್ತಿಯನ್ನು ಕೂಡ ನೇಮಿಸಬಹುದು ಎಂದು ಅವರು ಹೇಳುತ್ತಿದ್ದಾರೆ. ಆರ್‌ಟಿಐ ಕಾಯ್ದೆಯಲ್ಲಿ ಯಾವುದೇ ಪೂರ್ವ ಅನುಭವವಿಲ್ಲದ ಪತ್ರಕರ್ತರೊಬ್ಬರನ್ನು ಸರ್ಕಾರವನ್ನು ಹೊಗಳುವ ಲೇಖನಗಳನ್ನು ಬರೆದ ಕಾರಣಕ್ಕೆ ಸಿಐಸಿಗೆ ನೇಮಿಸಲಾಗಿದೆ. ಸರಿಯಾದ ಮಾನದಂಡಗಳನ್ನು ಅನುಸರಿಸದೆ ಜನರನ್ನು ‘ಏರ್-ಡ್ರಾಪ್’ ಮಾಡಲಾಗುತ್ತಿದೆ” ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದರು.

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗಿದೆ ಎಂದು ಒಪ್ಪಿಕೊಂಡ ನ್ಯಾಯಮೂರ್ತಿ ಕಾಂತ್, ಈ ಪ್ರಕ್ರಿಯೆಯು 2-3 ವಾರಗಳಲ್ಲಿ ಮುಗಿಯುವುದರಿಂದ ಫಲಿತಾಂಶಕ್ಕಾಗಿ ಕಾಯುವುದು ಉತ್ತಮ ಎಂದು ಪ್ರಶಾಂತ್ ಭೂಷಣ್ ಅವರಿಗೆ ಸೂಚಿಸಿದ್ದಾರೆ. “ನೀವು ಹೇಳಿದ್ದು ಸರಿ ವಿಳಂಬವಾಗಿದೆ. ಆದರೆ, ಅವರು ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಸರಿಯಾದ ಸಮಯ ಬರಲಿ” ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ತಿಳಿಸಿದ್ದಾರೆ.

“ನೇಮಕಾತಿಗಿಂತ ಮೊದಲು ಪಾರದರ್ಶಕತೆ ಇರಬೇಕು. ಯಾರು ಅರ್ಜಿ ಸಲ್ಲಿಸಿದ್ದಾರೆ, ಅವರ ಆಯ್ಕೆಗೆ ಮಾನದಂಡಗಳು ಯಾವುವು ಮತ್ತು ಯಾರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ನೇಮಕಾತಿಗೆ ಮೊದಲು ಇದನ್ನು ಮಾಡಬೇಕು” ಎಂದು ಭೂಷಣ್ ವಾದಿಸಿದ್ದಾರೆ.

ಈ ವೇಳೆ ನೇಮಕಾತಿ ಪೂರ್ವ ಬಹಿರಂಗಪಡಿಸುವಿಕೆಯ ಅರ್ಜಿಯನ್ನು ವಿರೋಧಿಸಿದ ಎಎಸ್‌ಜಿ ನಟರಾಜ್, “ಯಾವುದೇ ಅನರ್ಹ ವ್ಯಕ್ತಿಯನ್ನು ನೇಮಿಸಿದರೆ, ನೇಮಕಾತಿಯ ನಂತರ ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಆಯ್ಕೆ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ನ್ಯಾಯಾಂಗದ ಹಸ್ತಕ್ಷೇಪವು ಕಾರ್ಯನಿರ್ವಹಣೆಗೆ ಅಡ್ಡಿಯಾಗಬಹುದು. ನಾವು ಪ್ರತಿ ಹಂತಕ್ಕೂ ನ್ಯಾಯಾಂಗ ಪರಿಶೀಲನೆಯನ್ನು ಪ್ರಾರಂಭಿಸಿದರೆ ಯಾವುದೇ ಆಯ್ಕೆ ಸಾಧ್ಯವಿಲ್ಲ. ಪಾರದರ್ಶಕತೆ ಇರಬೇಕು, ಮತ್ತು ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ. ತಿಳಿದುಕೊಳ್ಳುವ ಹಕ್ಕು ಇದೆ, ಮತ್ತು ಅದಕ್ಕೆ ಯಾವುದೇ ಅಪವಾದ ಆಗಲು ಬಿಡುವುದಿಲ್ಲ” ಎಂದಿದ್ದಾರೆ.

ಯಾವುದೇ ಅನರ್ಹ ನೇಮಕಾತಿ ನಡೆದರೆ ನ್ಯಾಯಾಲಯ ಮಧ್ಯಪ್ರವೇಶಿಸುತ್ತದೆ ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ಭರವಸೆ ನೀಡಿದ್ದಾರೆ.

ಹಲವಾರು ರಾಜ್ಯಗಳು ಈಗಾಗಲೇ ಶಾರ್ಟ್‌ಲಿಸ್ಟ್ ಮಾಡಿದ ಹೆಸರುಗಳನ್ನು ಬಹಿರಂಗಪಡಿಸುತ್ತಿದ್ದರೆ, ಕೇಂದ್ರವು ಅದೇ ರೀತಿ ಏಕೆ ಮಾಡಬಾರದು? ಈ ದೇಶದ ಜನರಿಗೆ ಯಾರನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿಯುವ ಹಕ್ಕು ಏಕೆ ಇರಬಾರದು? ಎಂದು ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಅವರು ಬಹಿರಂಗಪಡಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಹೇಳಿದ್ದಾರೆ. ನೇಮಕಾತಿ ಮುಗಿಯುವ ಮೊದಲು ಅವರು ಅದನ್ನು ಮಾಡಬೇಕು” ಎಂದು ಭೂಷಣ್ ಆಗ್ರಹಿಸಿದ್ದಾರೆ.

ಭೂಷಣ್ ಅವರ ಭಾರೀ ಮನವಿಯ ಹೊರತಾಗಿಯೂ, ಶಾರ್ಟ್‌ಲಿಸ್ಟ್ ಮಾಡಲಾದ ಹೆಸರುಗಳನ್ನು ಬಹಿರಂಗಪಡಿಸಲು ಪೀಠವು ಯಾವುದೇ ನಿರ್ದೇಶನವನ್ನು ನೀಡಿಲ್ಲ.

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...