HomeಮುಖಪುಟEVM ಕುರಿತು ಕೋರಿದ್ದ ಪ್ರಶ್ನೆಗೆ ಉತ್ತರಿಸದ ಚುನಾವಣಾ ಆಯೋಗ: ಕೇಂದ್ರ ಮಾಹಿತಿ ಆಯೋಗ ತರಾಟೆ

EVM ಕುರಿತು ಕೋರಿದ್ದ ಪ್ರಶ್ನೆಗೆ ಉತ್ತರಿಸದ ಚುನಾವಣಾ ಆಯೋಗ: ಕೇಂದ್ರ ಮಾಹಿತಿ ಆಯೋಗ ತರಾಟೆ

- Advertisement -
- Advertisement -

ಚುನಾವಣೆಯ ಸಂದರ್ಭದಲ್ಲಿ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ವಿಶ್ವಾಸಾರ್ಹತೆ ವಿಷಯದ ಕುರಿತು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಮಾಹಿತಿ ನೀಡದ ಚುನಾವಣಾ ಆಯೋಗದ ಬಗ್ಗೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಟೀಕಿಸಿದೆ ಮತ್ತು 30 ದಿನಗಳೊಳಗೆ ಲಿಖಿತ ವಿವರಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸಿಐಸಿ ಸೂಚಿಸಿದೆ. ಇದಲ್ಲದೆ ಮಾಹಿತಿಯನ್ನು ನೀಡದಿರುವುದು ಕಾನೂನಿನ ಘೋರ ಉಲ್ಲಂಘನೆ ಎಂದು ಹೇಳಿದೆ.

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ), ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮತ್ತು ಮತ ಎಣಿಕೆ ವಿಶ್ವಾಸಾರ್ಹತೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದವರಲ್ಲಿ ಓರ್ವರಾದ ಮಾಜಿ ಐಎಎಸ್ ಅಧಿಕಾರಿ ಎಂ ಜಿ ದೇವಸಹಾಯಂ ಅವರು ಈ ಕುರಿತು ಆರ್‌ಟಿಐ ಮಾಹಿತಿಯನ್ನು ಕೋರಿದ್ದು, ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆಯನ್ನು ನೀಡುವಂತೆ ಆಗ್ರಹಿಸಿದ್ದರು.

ನವೆಂಬರ್ 22, 2022ರಂದು ಸಲ್ಲಿಸಲಾದ ಆರ್‌ಟಿಐ ಅರ್ಜಿಯಲ್ಲಿ, ಸಾರ್ವಜನಿಕ ಅಧಿಕಾರಿಗಳು, ಸಮಸ್ಯೆಯ ಕುರಿತು ನಡೆಸಿದ ಸಭೆಗಳ ವಿವರಗಳು ಮತ್ತು ಎಲ್ಲಾ ಸಂಬಂಧಿತ ಟಿಪ್ಪಣಿಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಬಯಸಿದ್ದರು. ಕಡ್ಡಾಯವಾಗಿ 30 ದಿನಗಳ ಅವಧಿಯೊಳಗೆ ವರದಿ ಸಲ್ಲಿಸಬೇಕೆಂದಿದ್ದರೂ ಚುನಾವಣಾ ಆಯೋಗ ಅವರಿಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹಿರಿಯ ಅಧಿಕಾರಿಗಳು ದೇವಸಹಾಯಂ ಅವರ ಮೊದಲ ಮನವಿಯನ್ನು ಆಲಿಸಲಿಲ್ಲ. ಆದ್ದರಿಂದ ಅವರು ಎರಡನೇ ಬಾರಿಗೆ ಚುನಾವಣಾ ಆಯೋಗಕ್ಕೆ ಮನವಿಯನ್ನು ಸಲ್ಲಿಸಿದ್ದರು.

ಮುಖ್ಯ ಮಾಹಿತಿ ಆಯುಕ್ತ ಹೀರಾಲಾಲ್ ಸಮರಿಯಾ ಅವರನ್ನು ಈ  ಬಗ್ಗೆ ಪ್ರಶ್ನಿಸಿದಾಗ, ದೇವಸಹಾಯಂಗೆ ಏಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ ಎಂಬ ಬಗ್ಗೆ ತೃಪ್ತಿಕರ ಉತ್ತರವನ್ನು ನೀಡಲು ವಿಫಲರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ. ಆರ್‌ಟಿಐ ಅರ್ಜಿಗೆ 30 ದಿನಗಳೊಳಗೆ ಪ್ರತಿಕ್ರಿಯೆಯನ್ನು ನೀಡುವಂತೆ ಸಮರಿಯಾ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮತ್ತು ಭಾರತೀಯ ನಿರ್ವಹಣಾ ಸಂಸ್ಥೆ (ಐಐಎಂ) ಪ್ರಾಧ್ಯಾಪಕರು ಸೇರಿದಂತೆ ಪ್ರಸಿದ್ಧ ತಾಂತ್ರಿಕ ವೃತ್ತಿಪರರು ಮತ್ತು ಶಿಕ್ಷಣ ತಜ್ಞರು ಮತ್ತು ನಿವೃತ್ತ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಸೇರಿದಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿಕೊಂಡು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಪತ್ರದಲ್ಲಿ ತಾಂತ್ರಿಕ ವೃತ್ತಿಪರರು, ಶಿಕ್ಷಣ ತಜ್ಞರು ಮತ್ತು ಮಾಜಿ ನಾಗರಿಕ ಸೇವಾಧಿಕಾರಿಗಳು ಈ ಬಗ್ಗೆ ಇಸಿಐನಿಂದ ತುರ್ತು ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದರು.

ಇದನ್ನು ಓದಿ: ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...