Homeಕರ್ನಾಟಕಉಡುಪಿ| ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಸಿಐಡಿ ಚಾರ್ಜ್‌ ಶೀಟ್‌ನಲ್ಲಿ ಹೇಳಿದ್ದೇನು?

ಉಡುಪಿ| ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಸಿಐಡಿ ಚಾರ್ಜ್‌ ಶೀಟ್‌ನಲ್ಲಿ ಹೇಳಿದ್ದೇನು?

- Advertisement -
- Advertisement -

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್‌ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ ನ್ಯಾಯಾಲಯಕ್ಕೆ ಚಾರ್ಜ್ ಶೀಟ್‌ ಸಲ್ಲಿಸಿದ್ದಾರೆ.

ವರದಿಗಳ ಪ್ರಕಾರ, ತನಿಖೆಯಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಮೂಲಕ ತಮ್ಮ ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಸಿಐಡಿ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಆರೋಪಿ ವಿದ್ಯಾರ್ಥಿನಿಯರು ತಮ್ಮ ಗೆಳತಿಯ ವಿಡಿಯೋ ಮಾಡಲು ಹೋಗಿ ಬೇರೆ ಯುವತಿಯರ ಖಾಸಗಿ ವಿಡಿಯೋ ಮಾಡಿದ್ದರು. ಬಳಿಕ ಸಾಕ್ಷ್ಯ ನಾಶಮಾಡಲು ಮೊಬೈಲ್‌ನಲ್ಲಿದ್ದ ವಿಡಿಯೋ ಡಿಲಿಟ್ ಮಾಡಿರುವುದು ತನಿಖೆಯಲ್ಲಿ ಸಾಭೀತಾಗಿದೆ ಎಂದು ಸಿಐಡಿ ಅಧಿಕಾರಿಗಳು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ

ಚಾರ್ಜ್‌ ಶೀಟ್‌ನಲ್ಲಿ ಏನಿದೆ?

ಆರೋಪಿತ ವಿದ್ಯಾರ್ಥಿನಿಯರು ತಮಾಷೆ ಅಥವಾ ಪ್ರ್ಯಾಂಕ್ ವಿಡಿಯೋ ಮಾಡುವ ಹವ್ಯಾಸ ಹೊಂದಿದ್ದರು. ಜುಲೈ 18, 2023ರಂದು ಕಾಲೇಜಿನ ಶೌಚಾಲಯದಲ್ಲಿ ತಮ್ಮ ಗೆಳತಿಯ ವಿಡಿಯೋ ಮಾಡಿದ್ದರು. ಆದರೆ, ಅವರು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಗೆಳತಿಯ ಬದಲಾಗಿ ಸಹಪಾಠಿ ಯುವತಿ ಇರುವುದು ಗೊತ್ತಾಗಿದೆ.

ಕೂಡಲೇ ವಿಡಿಯೋ ಡಿಲಿಟ್ ಮಾಡಿದ ವಿದ್ಯಾರ್ಥಿನಿಯರು ಸಂತ್ರಸ್ತೆಗೆ ತಪ್ಪಾಗಿ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆ ಯಾಚಿಸಿದ್ದಾರೆ. ಬಳಿಕ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಆಡಳಿತ ಮಂಡಳಿ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದಾಗ ಅವರು ವಿಡಿಯೋ ಮಾಡಿರುವುದನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ.

ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ಕೊಟ್ಟಿರುವ ಕ್ಷಮಾಪಣಾ ಪತ್ರದ ಬರಹಕ್ಕೂ ಅವರ ಕೈ ಬರಹಕ್ಕೂ ತಾಳೆಯಾಗುತ್ತಿದೆ ಎಂದು ಎಫ್‌ಎಸ್‌ಎಲ್‌ ವರದಿ ದೃಢೀಕರಿಸಿದೆ. ಕಾಲೇಜಿನ ಸಿಸಿಟಿವಿ ವಿಡಿಯೋ ಕೂಡ ವಿದ್ಯಾರ್ಥಿನಿಯರ ಮೇಲಿರುವ ಆರೋಪಕ್ಕೆ ಪೂರಕವಾಗಿದೆ ಎಂದು ಸಿಐಡಿ ತನ್ನ ಚಾರ್ಜ್‌ ಶೀಟ್‌ನಲ್ಲಿ ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಪ್ರಕರಣದ ಹಿನ್ನೆಲೆ:

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ತಮ್ಮ ಸಹಪಾಠಿಯ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಪ್ರಕರಣ ಕಳೆದ ವರ್ಷ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ, ಎಬಿವಿಪಿ ಸೇರಿದಂತೆ ಹಿಂದುತ್ವ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರಕರಣ ಸಂಬಂಧ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಪೂರ್ಣಗೊಳಿಸಿರುವ ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ : ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...