ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು - ಸಿದ್ದರಾಮಯ್ಯ ಆಗ್ರಹ

ದೆಹಲಿಯಲ್ಲಿ ಕಳೆದ 2 ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಟ-ನಟಿಯರು ಬೀದಿಗಿಳಿದು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ?”

ಇದನ್ನೂ ಓದಿ: ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಜನವರಿ 26 ರಂದು ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಚೋದಿತ ಗುಂಪೊಂದು ಮಾರ್ಗ ಬದಲಿಸಿ ಕೆಂಪುಕೋಟೆಯ ಕಡೆ ನುಗ್ಗಿ ಅಲ್ಲಿ ಸಿಖ್ ಧರ್ಮದ ಬಾವುಟವನ್ನು ಹಾರಿಸಿತ್ತು. ಜೊತೆಗೆ ಪೊಲೀಸರೊಡನೆ ಘರ್ಷಣೆಯೂ ನಡೆದಿತ್ತು. ಇದು ದೇಶದಾದ್ಯಂತ ವ್ಯಾಪಕ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿತ್ತು.

ಜನವರಿ 26 ರ ಗಣರಾಜ್ಯೋತ್ಸವಂದು ರೈತರು ನಡೆಸಿದ ಟ್ರಾಕ್ಟರ್ ಪರೇಡ್ ‌ನಂತರ ರೈತ ಹೋರಾಟದ ಸ್ಥಳಗಳಲ್ಲಿ ಅಹಿತಕರ ಘಟನೆ ನಡೆದಿತ್ತು. ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಇದನ್ನು ಬಿಜೆಪಿಯೆ ಮಾಡಿಸಿದೆ ಎಂದು ವರದಿ ಮಾಡಿದೆ. ಅದಾಗಿಯು, ಕೇಂದ್ರ ಸರ್ಕಾರ ದೆಹಲಿಯ ಹೋರಾಟದ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು. ಇದು ಜಗತ್ತಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ರೈತರನ್ನು ಬೆದರಿಸಲು ಮಾಡುತ್ತಿರುವ ಎಲ್ಲಾ ಪ್ರಯತ್ನಗಳ ಹೊರತಾಗಿಯು ರೈತರು ಹೋರಾಟದಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

LEAVE A REPLY

Please enter your comment!
Please enter your name here