Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...