Homeಕರ್ನಾಟಕ'ಸಾಮಾಜಿಕ ಸಮಸ್ಯೆಗಳಿಗೆ ಸಿನಿಮಾ ಪರಿಹಾರ ಹುಡುಕಬೇಕು..'; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ

‘ಸಾಮಾಜಿಕ ಸಮಸ್ಯೆಗಳಿಗೆ ಸಿನಿಮಾ ಪರಿಹಾರ ಹುಡುಕಬೇಕು..’; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ

- Advertisement -
- Advertisement -

“ಸಾಮಾಜಿಕ ಸಮಸ್ಯೆಗಳಿಗೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು; ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಚಲನಚಿತ್ರೋದ್ಯಮಕ್ಕೆ ಸಲಹೆ ನೀಡಿದರು.

ವಿಧಾನಸೌಧದ ಆವರಣದಲ್ಲಿ ಶನಿವಾರ ಸಂಜೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು” ಎಂದರು.

“ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

“ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು” ಎಂದು ಚಿತ್ರೋದ್ಯಮಕ್ಕೆ ಸಿಎಂ ಕಿವಿಮಾತು ಹೇಳಿದರು.

“ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು. ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು.
ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ” ಎಂದರು.

“ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ” ಎಂದು ಸಿದ್ದರಾಮಯ್ಯ ಹೇಳಿದರು.

ಜಗ್ಗಿ ವಾಸುದೇವ್‌ ಕಾರ್ಯಕ್ರಮಕ್ಕೆ ಶಿವಕುಮಾರ್ ಭೇಟಿ; ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...