Homeಕರ್ನಾಟಕಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; 'ಆರ್‌ ಕನ್ನಡ' ಮುಖ್ಯಸ್ಥ ಅರ್ನಬ್ ಮೇಲೆ ಎಫ್‌ಐಆರ್‌ ದಾಖಲು

ಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; ‘ಆರ್‌ ಕನ್ನಡ’ ಮುಖ್ಯಸ್ಥ ಅರ್ನಬ್ ಮೇಲೆ ಎಫ್‌ಐಆರ್‌ ದಾಖಲು

- Advertisement -
- Advertisement -

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ, ರಾಜ್ಯದಲ್ಲಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ‘ರಿಪಬ್ಲಿಕ್ ಟಿವಿ’ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಕನ್ನಡದ ‘ಆರ್.‌ಕನ್ನಡ’ ಸಂಪಾದಕ ನಿರಂಜನ್ ವಿರುದ್ಧ ಬೆಂಗಳೂರಿನ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ರವೀಂದ್ರ ಎಂಡಿ ಅವರು ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15ಕ್ಕೆ ‘ಆರ್ ಕನ್ನಡ’ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದ ವಿಡಿಯೋ ತುಣುಕನ್ನು ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು.

ಆದರೆ, ಅಂದು ಸಿಎಂ ಸಿದ್ಧರಾಮಯ್ಯ ಅವರು ಮೈಸೂರಿನಲ್ಲಿದ್ದು, ಬೆಂಗಳೂರಿನಲ್ಲಿ ಅವರು ಸಂಚಾರ ಮಾಡಿರಲಿಲ್ಲ. ಈ ವಿಡಿಯೋವನ್ನು ಪರಿಶೀಲನೆ ನಡೆಸದೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ನಿಟ್ಟಿನಲ್ಲಿಯೇ ತಪ್ಪು ಮಾಹಿತಿ ಪ್ರಸಾರ ಮಾಡಲಾಗಿದೆ ಎಂದು ದೂರು ನೀಡಿದೆ.

ಈ ದೂರಿನ ಆಧಾರದಲ್ಲಿ ತಪ್ಪು ಮಾಹಿತಿ ಪ್ರಸಾರ ಮಾಡಿರುವ ಆರ್ ಕನ್ನಡ (ರಿಪಬ್ಲಿಕ್) ವಾಹಿನಿಯ ಮಾಲೀಕ ಅರ್ನಬ್ ಗೋ ಸ್ವಾಮಿ ಮತ್ತು ಸಂnabಪಾದಕ ನಿರಂಜನ್ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಇದನ್ನೂ ಓದಿ; ‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...