Homeಮುಖಪುಟಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಿಜೋರಾಂಗೆ ಬಂದರೆ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಮಿಜೋರಾಂನ ಜನರೆಲ್ಲರೂ ಕ್ರಿಶ್ಚಿಯನ್ನರು. ಮಣಿಪುರದಲ್ಲಿ ಮೇಟಿ ಜನರು ನೂರಾರು ಚರ್ಚ್‌ಗಳನ್ನು ಸುಟ್ಟುಹಾಕಿದಾಗ ಮಿಜೋರಾಂ ಜನರು ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದಾರೆ. ಈ ಸಮಯದಲ್ಲಿ ಬಿಜೆಪಿಯೊಂದಿಗೆ ಸಹಾನುಭೂತಿ ಹೊಂದುವುದು ನಮ್ಮ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುತ್ತದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಪ್ರಧಾನಿ ಬಂದು ವೇದಿಕೆಯಲ್ಲಿ ಅವರು ಒಬ್ಬರೇ ಇರಲಿ. ನಾನು ಮಾತ್ರ ಪ್ರತ್ಯೇಕವಾದ ವೇದಿಕೆಯಲ್ಲಿ ಚುನಾವಣೆ ಪ್ರಚಾರ ಮಾಡುತ್ತೇನೆ. ಮಿಜೋ ನ್ಯಾಷನಲ್ ಫ್ರಂಟ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಯಾಕೆಂದರೆ ನಮ್ಮ ಪಕ್ಷವು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿದ್ದರೂ ಮಣಿಪುರದ ಹಿಂಸಾಚಾರದ ಹಿನ್ನೆಲೆ ಪ್ರಧಾನಿ ಮೋದಿಯ ಜೊತೆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಹೇಳಿದ್ದಾರೆ.

ಮಣಿಪುರ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ನಿರಾಶ್ರಿತರಿಗೆ ಮಿಜೋರಾಂ ಆಶ್ರಯ ನೀಡಲಿದೆ. ನಾವು ಮ್ಯಾನ್ಮಾರ್‌ನ ನಿರಾಶ್ರಿತರಿಗೆ ಮಾನವೀಯ ಆಧಾರದ ಮೇಲೆ ಆಹಾರ ಮತ್ತು ಆಶ್ರಯವನ್ನು ಒದಗಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಿರಾಶ್ರಿತರಿಂದ ಬಯೋಮೆಟ್ರಿಕ್ ಡೇಟಾವನ್ನು ಸಂಗ್ರಹಿಸಲು ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನವನ್ನು ತಮ್ಮ ಸರ್ಕಾರ ಅನುಸರಿಸುವುದಿಲ್ಲ ಎಂದು ಕಳೆದ ತಿಂಗಳು ಝೋರಮ್‌ತಂಗಾ ಹೇಳಿದ್ದರು. ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ಮತ್ತು ದತ್ತಾಂಶಗಳ ಸಂಗ್ರಹವು ತಾರತಮ್ಯವನ್ನು ಉಂಟುಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಇದನ್ನು ಕೈಗೊಳ್ಳದಿರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಹಲವಾರು ಬಿಜೆಪಿ ನಾಯಕರು ಒತ್ತಾಯಿಸುತ್ತಿರುವ ಏಕರೂಪ ನಾಗರಿಕ ಸಂಹಿತೆಯ ಯೋಜನೆಗಳ ವಿರುದ್ಧವೂ ಝೊರಮ್‌ತಂಗಾ ಮಾತನಾಡಿದ್ದಾರೆ. ಅವರು ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರದ ಬಗ್ಗೆ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ.

ಇದನ್ನು ಓದಿ: ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...