HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...