HomeಅಂಕಣಗಳುKarnataka against SIRSIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

- Advertisement -
- Advertisement -

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್ ಜಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮತ್ತು ಮತದಾರರ ಹಕ್ಕುಗಳ ರಕ್ಷಣೆಗಾಗಿ ರಾಜ್ಯಾದ್ಯಂತ ಅತ್ಯಂತ ವಿಸ್ತಾರವಾದ ಚಳವಳಿ ರೂಪಿಸಲು ತೀರ್ಮಾನಿಸಲಾಗಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯ ನಾಯಕರಾದ ನೂರ್ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಸಾರ್ವಜನಿಕರ ಯಾವುದೇ ಮನವಿಗಳಿಗೆ ಬೆಲೆ ಕೊಡದೆ ಸರ್ವಾಧಿಕಾರಿಯಂತೆ ‘ಎಸ್‌ಐಆರ್’ (SIR) ವ್ಯವಸ್ಥೆಯನ್ನು ಜಾರಿ ಮಾಡುತ್ತಿದೆ ಎಂದು ನೂರ್ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಿಂದಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರು ತಮ್ಮ ವೋಟಿಂಗ್ ಹಕ್ಕನ್ನೇ ಕಳೆದುಕೊಂಡಿದ್ದಾರೆ. ಈ ವ್ಯವಸ್ಥೆ ಅತ್ಯಂತ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಇದರ ವಿರುದ್ಧ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಆಯೋಗ ಮಾತ್ರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಹೊಸ ಸಾಫ್ಟ್‌ವೇರ್ ನಿಯಮಗಳಿಂದಾಗಿ ರಾಜ್ಯದ ಒಂದು ಕೋಟಿಗೂ ಅಧಿಕ ಮಂದಿ ವೋಟಿಂಗ್ ಹಕ್ಕಿನಿಂದ ವಂಚಿತರಾಗುವ ಸ್ಪಷ್ಟ ಮುನ್ಸೂಚನೆಗಳು ಕಾಣಿಸುತ್ತಿವೆ. ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಅನಕ್ಷರಸ್ಥರಿಗೆ ಇದರಿಂದ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ‘ತಾರ್ಕಿಕ ವ್ಯತ್ಯಾಸ’ (Logical Discrepancy) ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುತ್ತಿದ್ದು, ಅಲ್ಲಿಗಿಂತಲೂ ಕಠಿಣ ನಿಯಮಗಳನ್ನು ಇಲ್ಲಿ ಹೇರಲಾಗುತ್ತಿದೆ. ಇದರ ಪರಿಣಾಮವಾಗಿ ಮುಂದಿನ ತಿಂಗಳೇ ಕೋಟ್ಯಂತರ ಜನರಿಗೆ ನೋಟಿಸ್ ಬರಲಿದ್ದು, ದಾಖಲೆಗಳನ್ನು ಒದಗಿಸಲಾಗದೆ ಬಡವರು ತತ್ತರಿಸುವ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಮತ ಕಾವಲು ಸಮಿತಿಯ 5 ಪ್ರಮುಖ ಕಾರ್ಯಸೂಚಿಗಳು:

ಈ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಚನೆಯಾಗಿರುವ ‘ನಾಗರಿಕ ಮತ ಕಾವಲು ಸಮಿತಿ’ಯು ಐದು ಪ್ರಮುಖ ಕಾರ್ಯಸೂಚಿಗಳೊಂದಿಗೆ ಕೆಲಸ ಮಾಡಲಿದೆ:

  1. SIR ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ದಿನನಿತ್ಯದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳು ಹಾಗೂ ಮಾಧ್ಯಮಗಳ ಗಮನಕ್ಕೆ ತರುವುದು.
  2. ಜನರ ಗೊಂದಲಗಳನ್ನು ಪರಿಹರಿಸಿ ಸೂಕ್ತ ರೀತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನೆರವಾಗುವುದು.
  3. ಸರ್ಕಾರ ಘೋಷಿಸಿರುವ ಸಹಾಯವಾಣಿ ಮತ್ತು ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ ವಿತರಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನಿಗಾವಹಿಸುವುದು.
  4. ಪ್ರತಿ ಬೂತ್ ಮಟ್ಟದಲ್ಲೂ ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಿ, ನೋಟಿಸ್ ಪಡೆದವರಿಗೆ ನೆರವಾಗುವುದು ಹಾಗೂ ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಸಂಘಟಿಸಿ ಮರು-ಸೇರ್ಪಡೆಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವುದು.
  5. ಅರ್ಹ ಮತದಾರರ ರಕ್ಷಣೆಗಾಗಿ ತಕ್ಷಣವೇ ‘ವಿಶೇಷ ಗ್ರಾಮ ಅಥವಾ ವಾರ್ಡ್ ಸಭೆ’ಗಳನ್ನು ಕರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವುದು.

ಈ ಎಲ್ಲ ಅಂಶಗಳ ಯಶಸ್ವಿ ಅನುಷ್ಠಾನಕ್ಕಾಗಿ ಜುಲೈ 8 ರಿಂದ 15 ರವರೆಗೆ ರಾಜ್ಯಾದ್ಯಂತ ಬೂತ್ ಮಟ್ಟದವರೆಗೂ ಸರಣಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಈ ಮಹತ್ವದ ‘ಮತ ಕಾವಲು ಅಭಿಯಾನ’ದಲ್ಲಿ ರಾಜ್ಯದ ಎಲ್ಲ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕ-ಯುವತಿಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಭಿಯಾನದಲ್ಲಿ ಕೈಜೋಡಿಸಲು ಇಚ್ಛಿಸುವರು 96060 87560 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಭಾಗಿಯಾಗಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ರೈತ ಹೋರಾಟಗಾರ ವೀರಸಂಗಯ್ಯ, ತಾರಾ ರಾವ್, ಸೀತಾರಾಮ್ ಗುಂಡಪ್ಪ, ತಾಹೀರ್ ಹುಸೇನ್, ಬಸವರಾಜ್ ಕೌತಾಳ್, ಬಾಲಕೃಷ್ಣಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...