Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...