HomeUncategorizedಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

- Advertisement -
- Advertisement -

ಬಹುಚರ್ಚಿತ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವುದು ಸರಿಯಷ್ಟೇ. ಆದರೆ ಅಸಲಿ ಅಗ್ನಿಪರೀಕ್ಷೆ ಇಂದು ರಾಜ್ಯಸಭೆಯಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಚರ್ಚೆಯ ನಂತರ ಬಹುಮತಕ್ಕೆ ಬೀಳುವ ಸಂಭವವಿದ್ದು ತೀವ್ರ ಕುತೂಹಲ ಕೆರಳಿಸಿದೆ.

ಮಸೂದೆಯನ್ನು ಮೇಲ್ಮನೆಯಲ್ಲಿ ಸಹ ಸರಾಗವಾಗಿ ಪಾಸುವ ಮಾಡುವ ಬಗ್ಗೆ ಪಕ್ಷಕ್ಕೆ ವಿಶ್ವಾಸವಿದೆ ಎಂದು ಆಡಳಿತಾರೂಡ BJP ಬಿಜೆಪಿ ಮೂಲಗಳು ತಿಳಿಸಿವೆ.

ಎನ್‌ಡಿಎಯು ಲೋಕಸಭೆಯಲ್ಲಿ ಅಗಾಧ ಬಹುಮತವನ್ನು ಹೊಂದಿತ್ತು. ಹಾಗಾಗಿಯೇ ಅಲ್ಲಿ ಮಸೂದೆಯ ಪರವಾಗಿ 311 ಮತಗಳನ್ನು ಪಡೆಯಲು ಸಾಧ್ಯವಾದರೆ ಅದರ ವಿರುದ್ಧ 80 ಮತಗಳಷ್ಟೇ ಬಿದ್ದಿದ್ದವು.

ಪ್ರಸ್ತುತ ರಾಜ್ಯಸಭೆಯಲ್ಲಿ 240 ಸದಸ್ಯರ ಬಲವಿದೆ. ಬಹುಮತ 121 ಆಗಿದೆ. ಎಐಎಡಿಎಂಕೆ, ಜನತಾದಳ-ಯುನೈಟೆಡ್ ಮತ್ತು ಅಕಾಲಿ ದಳದಂತಹ ಪಕ್ಷಗಳನ್ನು ಒಳಗೊಂಡ ಎನ್‌ಡಿಎ 116 ಸದಸ್ಯರನ್ನು ಹೊಂದಿದೆ ಮತ್ತು ಇತರ 14 ಜನರ ಬೆಂಬಲವನ್ನು ಅದು ನಿರೀಕ್ಷಿಸುತ್ತಿದೆ. ಆಗ ಅದರ ಸಂಖ್ಯೆ 130 ಆಗಲಿದ್ದು ಮಸೂದೆ ಮಂಡನೆ ಸಹಾಯಕವಾಗಲಿದೆ.

ಈ 14 ಜನ ಹೊರಗಿನ ಸದಸ್ಯರಲ್ಲಿ ಲೋಕಸಭೆಯಲ್ಲಿ ಮಸೂದೆಯ ಪರವಾಗಿ ಮತ ಚಲಾಯಿಸಿದ ಬಿಜೆಪಿಯ ಮಾಜಿ ಮಿತ್ರ ಶಿವಸೇನೆಯೂ ಮೂವರು ಸದಸ್ಯರನ್ನು ಒಳಗೊಂಡಿದೆ. ಆದರೆ ರಾಜ್ಯಸಭೆಯಲ್ಲಿ ಅದರ ಬೆಂಬಲ ಖಚಿತವಾಗಿಲ್ಲ ಎಂದು ಹೇಳಿದ್ದಾರೆ. ಶಿವಸೇನೆ ಬೆಂಬಲ ನೀಡದಿದ್ದರೂ ಸಹ ಬಿಜೆಪಿಗೆ 127 ಸದಸ್ಯರ ಬೆಂಬಲ ದೊರಕಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿಯ ಏಳು ಸದಸ್ಯರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್‌ಸಿಪಿಯಿಂದ ಇಬ್ಬರು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯಿಂದ ಇಬ್ಬರು ಮತ್ತು ಶಿವಸೇನೆಯ ಮೂವರು ಸದಸ್ಯರು ಬಿಜೆಪಿಗೆ ಹೊರಗಿನಿಂದ ಬೆಂಬಲ ಸೂಚಿಸಬಹುದಾದ 14 ರಾಜ್ಯಸಭಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಏನಿದು ಪೌರತ್ವ ತಿದ್ದುಪಡಿ ಮಸೂದೆ?

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) 64 ಸದಸ್ಯರನ್ನು ಹೊಂದಿದೆ. ಮತ್ತು ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ದಂತಹ ಇತರ 46 ರಾಜ್ಯಸಭಾ ಸದಸ್ಯರು ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಅವರ ಒಟ್ಟು ಸಂಖ್ಯೆ 110 ಆಗಲಿದೆ.

ಈ ನಡುವೆ ನಿತೀಶ್‌ ಕುಮಾರ್‌ರವರ ಜೆಡಿಯು ಮಸೂದೆಯನ್ನು ಬೆಂಬಲಿಸಬಾರದು ಎಂದು ಅದರ ಉಪಾಧ್ಯಕ್ಷರಾದ ಪ್ರಶಾಂತ್‌ ಕಿಶೋರ್‌ ಒತ್ತಾಯಿಸಿದ್ದರೆ. ಹಾಗಾಗಿ ಏನಾದರೂ ಸಂಭವಿಸಬಹುದೆಂಬ ನಿರೀಕ್ಷೆಯಲ್ಲಿ ವಿರೋಧ ಪಕ್ಷಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...