Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ - ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

ಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ – ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

- Advertisement -
- Advertisement -

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುತ್ತಿರುವ ಬಗ್ಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಸೋಮವಾರ ನಿರಾಶೆ ವ್ಯಕ್ತಪಡಿಸಿದ ನಂತರ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಕೆ ವರ್ಮಾ ಅವರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಷಯದ ಕುರಿತು ಮರು ಆಲೋಚಿಸುವಂತೆ ಮನವಿ ಮಾಡಿದ್ದಾರೆ.

“ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವುದರ ಕುರಿತು ಮರುಪರಿಶೀಲಿಸುವಂತೆ ನಾನು ನಿತೀಶ್ ಕುಮಾರ್ ಅವರನ್ನು ಕೋರುತ್ತೇನೆ. ಈ ಮಸೂದೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದೆ ಮತ್ತು ಜೆಡಿಯುನ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದೆ. ಗಾಂಧೀಜಿಯವರು ಇದನ್ನು ಬಲವಾಗಿ ನಿರಾಕರಿಸುತ್ತಿದ್ದರು ”ಎಂದು ವರ್ಮಾ ಟ್ವೀಟ್ ಮಾಡಿದ್ದಾರೆ.

ಜೆಡಿಯು ಲೋಕಸಭೆಯಲ್ಲಿ 16 ಸಂಸದರು ಮತ್ತು ರಾಜ್ಯಸಭೆಯಲ್ಲಿ 6 ಸಂಸದರನ್ನು ಹೊಂದಿದೆ.

ಇವರಿಬ್ಬರು ಸಹ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕುರಿತು ಬಹಿರಂಗ ವಿರೋಧ ವ್ಯಕ್ತಪಡಿಸಿರುವುದು ಪಕ್ಷವನ್ನು ಮುಜುಗರಕ್ಕೀಡುಮಾಡಿದೆ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಜಾತ್ಯತೀತತೆ ಮತ್ತು ಗಾಂಧಿವಾದಿ ಆದರ್ಶಗಳ ಹೆಸರಿನಲ್ಲಿ ಪ್ರತಿಜ್ಞೆ ತೆಗೆದುಕೊಂಡು ಈ ಅಸಂಗತವಾದ ಮಸೂದೆಯನ್ನು ಬೆಂಬಲಿಸುವುದು ದುರದೃಷ್ಟಕರ ಎಂದು ಪ್ರಶಾಂತ್‌ ಕಿಶೋರ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಜೆಡಿಯು ಸಿಎಬಿಯನ್ನು ಬೆಂಬಲಿಸುತ್ತಿರುವುದನ್ನು ನೋಡಿ ನಿರಾಶೆಗೊಂಡೆ. ಅದು ಧರ್ಮದ ಆಧಾರದ ಮೇಲೆ ಪೌರತ್ವದ ಹಕ್ಕನ್ನು ತಾರತಮ್ಯಗೊಳಿಸುತ್ತದೆ. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಮತ್ತು ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವವನ್ನು ಹೊಂದಿರುವವರಿಗೆ ಇದು ಹೊಂದಿಕೆಯಾಗುವುದಿಲ್ಲ ” ರಾಜಕೀಯ ವಿಶ್ಲೇಷಕ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ 15 ರಾಜ್ಯಗಳಿಗೂ ಹೆಚ್ಚು ಮತ್ತು ಶೇ.55% ಜನರು ವಾಸಿಸುವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಅವುಗಳಲ್ಲಿ ಎಷ್ಟು ಜನರೊಡೆನೆ ಎನ್‌ಆರ್‌ಸಿ ಜಾರಿಗೊಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

“ಅವರು ತಮ್ಮ ಹಾದಿಯನ್ನು ಒಮ್ಮೆ ಅಲ್ಲ ಮೂರು ಬಾರಿ ಬದಲಾಯಿಸಿದ್ದಾರೆ. ಟ್ರಿಪಲ್ ತಲಾಖ್, 370 ಮತ್ತು ಈಗ ಸಿಎಬಿಯ ವಿಷಯವಾಗಿರಲಿ, ಅವರು ಅದೇ ರೀತಿ ಮಾಡಿದರು. ಅವರು ಜನರ, ಮತದಾರರ ಮನಸ್ಸಿನಲ್ಲಿ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ. ಜೆಡಿಯು ಅವರು ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆಂದು ತೋರಿಸಿಕೊಳ್ಳುತ್ತದೆ. ಆದರೆ ಸಮಯ ಬಂದಾಗ ಅವರು ಪಾರ್ಲಿಮೆಂಟ್‌ನಿಂದ ಹೊರಗುಳಿಯುತ್ತಾರೆ ಅಥವಾ ಅವರನ್ನೇ ಬೆಂಬಲಿಸುತ್ತಾರೆ ”ಎಂದು ಎ ಎನ್ ಸಿನ್ಹಾ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಸ್ಟಡೀಸ್‌ನ ರಾಜಕೀಯ ವಿಶ್ಲೇಷಕ ಡಿ ಎಂ ದಿವಾಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...