Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ ಮಂಡನೆ: ಭಾರೀ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆ ಮಂಡನೆ: ಭಾರೀ ಪ್ರತಿಭಟನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಪೌರತ್ವ ತಿದ್ದುಪಡಿ ಮಸೂದೆಯನ್ನು (2019) ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆ ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಕೆಳಮನೆಯಲ್ಲಿ ಚರ್ಚಿಸಬಾರದು ಎಂದು ಪ್ರತಿಪಕ್ಷಗಳು ಆರೋಪಿಸಿದರೆ, ಅಮಿತ್ ಶಾ ಅವರು ಉದ್ದೇಶಿತ ಶಾಸನವು ಮುಸ್ಲಿಮರ ವಿರುದ್ಧವಲ್ಲ ಎಂದು ಸಮರ್ಥಿಸಿಕೊಂಡರು. ಬಹಳ ಚರ್ಚೆಯ ನಂತರ, ’293’ ಮತಗಳು ಚರ್ಚೆಯ ಪರ ಬಿದ್ದಿದ್ದರಿಂದ  ಚರ್ಚೆಗೆ ಮಸೂದೆಯನ್ನು ಪರಿಚಯಿಸಲು ಸದನ ನಿರ್ಧರಿಸಿತು.

ಪ್ರಸ್ತಾವಿತ ಶಾಸನದ ಪ್ರಕಾರ, 2014 ರ ಡಿಸೆಂಬರ್ 31 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದಿರುವ ಮತ್ತು ಧಾರ್ಮಿಕ ಕಿರುಕುಳವನ್ನು ಎದುರಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರನ್ನು ಅಕ್ರಮ ವಲಸಿಗರೆಂದು ಪರಿಗಣಿಸಲಾಗುವುದಿಲ್ಲ. ಅವರಿಗೆ ಭಾರತೀಯ ಪೌರತ್ವ ನೀಡಲಾಗುವುದು.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳು, ಸಿಖ್ಖರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಮತ್ತು ಜೈನರ ವಿರುದ್ಧ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಈ ಮಸೂದೆಯು ಈ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ. ಅಲ್ಲದೆ, ಈ ಮಸೂದೆ ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬ ಆರೋಪ ತಪ್ಪಾಗಿದೆ ಎಂದು ಗೃಹ ಮಂತ್ರಿ ಅಮಿತ್‌ ಶಾ ತಿಳಿಸಿದ್ದಾರೆ.

ಈ ಮೂರು (ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ) ರಾಷ್ಟ್ರಗಳ ಯಾವುದೇ ಮುಸ್ಲಿಮರು ನಮ್ಮ ಕಾನೂನಿನ ಪ್ರಕಾರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದರೆ, ನಾವು ಅದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ಕಿರುಕುಳ ಎದುರಿಸದ ವ್ಯಕ್ತಿಯು ಈ ತಿದ್ದುಪಡಿಯ ಪ್ರಯೋಜನವನ್ನು ಪಡೆಯಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಸೂದೆಯ ವಿರುದ್ಧ ಕಳೆದ ಹಲವು ದಿನಗಳಿಂದ ಅಸ್ಸಾಂ, ಮಣಿಪುರ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೂಡ ಹಲವೆಡೆ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿವೆ.

ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ, ಸಿಪಿಐ, ಸಿಪಿಐ(ಎಂ), ಆಮ್‌ ಆದ್ಮಿ ಪಕ್ಷ, ಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿವೆ. ಬೀದಿಯಲ್ಲಿ ನೂರಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...