Homeಮುಖಪುಟಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

- Advertisement -
- Advertisement -

‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಪುಸ್ತಕ ಬಿಡುಗಡೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿದ್ದ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ರಿಟ್ ಅರ್ಜಿ ಆಲಿಸಿದ ಕೋರ್ಟ್ ಪುಸ್ತಕ ಬಿಡುಗಡೆ, ಮಾರಾಟ ಮತ್ತು ಮಾಧ್ಯಮ ಪ್ರಸಾರಕ್ಕೆ ತಡೆ ನೀಡಿದೆ.

ಕಳೆದ ತಿಂಗಳು ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿತ್ತು.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ನಿನ್ನೆ ಟ್ವೀಟ್ ಮಾಡಿದ್ದರು.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಬೇಕಿತ್ತು.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿತ್ತು.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...