Homeಕರ್ನಾಟಕತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ...

ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

- Advertisement -
- Advertisement -

ತಮ್ಮ ಮೇಲಿನ ಹಿಂಸಾಚಾರ, ಜಾತಿ ಹಾಗೂ ಲಿಂಗಾಧಾರಿತ ದೌರ್ಜನ್ಯ ಖಂಡಿಸಿ ಮಹಿಳಾ ಪೌರಕಾರ್ಮಿಕರು ಸಿಡಿದೆದ್ದಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ, “ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ” ಎಂದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಿಬಿಎಂಪಿ ಪೌರಕಾರ್ಮಿಕರ ಸಂಘವು ಖಂಡಿಸಿದೆ.

“2024ರ ಸೆಪ್ಟೆಂಬರ್ 11ರಂದು 72ನೇ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಹಿಳಾ ಪೌರಕಾರ್ಮಿಕರ ಮೇಲೆ ಸ್ಥಳೀಯರು ಭೀಕರವಾಗಿ ಹಲ್ಲೆ ಮಾಡಿ, ಸ್ಥಳೀಯ ನಿವಾಸಿಯಾದ ಚಂದ್ರು ಮತ್ತು ಅವರ ತಾಯಿ ಜಾತಿ ನಿಂದನೆ ಮಾಡಿ ಥಳಿಸಿದ್ದಾರೆ” ಎಂದು ಮಹಿಳಾ ಪೌಕಾರ್ಮಿಕರು ದೂರು ದಾಖಲಿಸಿದ್ದಾರೆ.

ಆರೋಪಿಗಳು ಜಾತಿ ಹೆಸರಿಡಿದು ಹಿಡಿದು ನಿಂದಿಸಿದ್ದೂ ಅಲ್ಲದೆ, ದೈಹಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ಮತ್ತೊಬ್ಬಾಕೆ ಪೌರಕಾರ್ಮಿಕರ ಮೇಲೆ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಫೋನನ್ನು ಒಡೆದುಹಾಕಿದ್ದಾರೆ. ಇತರೆ ಪೌರಕಾರ್ಮಿಕರನ್ನೂ ಅವರು ತಳಿಸಿದ್ದು ಅವರಿಗೂ ಗಾಯಗಳಾಗಿವೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೌರಕಾರ್ಮಿಕರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ; ಸ್ಥಳೀಯರ ಹಿಂಸಾಚಾರ ಹಾಗೂ ಘಟನೆ ಕುರಿತ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಪೌರಕಾರ್ಮಿಕರ ಸಂಘವು ಇಂದು ಪ್ರತಿಭಟನೆ ನಡೆಸಿದರು.

“ಪೌರಕಾರ್ಮಿಕರ ಕೆಲಸದ ಪರಿಸ್ಥಿತಿಯನ್ನು ಈ ಘಟನೆಯು ಎತ್ತಿತೋರಿಸುತ್ತದೆ. ಅವರ ಜಾತಿ, ಲಿಂಗ ಮತ್ತು ವರ್ಗದ ಮೇರೆಗೆ ಅವರುಗಳು ದಿನನಿತ್ಯ ಮುಪ್ಪಟ್ಟು ಶೋಷಣೆಯನ್ನು ಅನುಭವಿಸುತ್ತಾರೆ. ಸಾರ್ವಜನಿಕ ಅರೋಗ್ಯ ಸೇವೆಯಲ್ಲಿ ಅವರು ಅಗತ್ಯ ಸೇವೆ ಒದಗಿಸುತ್ತಿದ್ದರೂ ಸಹ, ತಾರತಮ್ಯ ಮತ್ತು ಹಿಂಸೆ ಇವರಿಗೆ ಮೀರಿದ್ದಲ್ಲ. ಇದನ್ನು ತುರ್ತಾಗಿ ಸರಿಪಡಿಸುವ ಅವಕ್ಷ್ಯಕತೆ ಇದೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ನಿರ್ಮಲಾ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.

ಘಟನೆಯಲ್ಲಿ ನೊಂದ ಪೌರಕಾರ್ಮಿಕರಾದ ಲಕ್ಷ್ಮಿ ಅವರು ಮಾತನಾಡಿ, “ಈ ಘಟಬೆಯು ನಮ್ಮ ಘನತೆಗೆ ಕುಂದುಂಟಾಗಿದೆ, ಅಧಿಕಾರಿಗಳು ಯಾವುದೇ ರೀತಿಯ ಜವಾಬ್ದಾರಿ ವಹಿಸಿರುವುದಿಲ್ಲ” ಎಂದು ಬೇಸರ ಹೊರಹಾಕಿದರು. “ಸಾರ್ವಜನಿಕವಾಗಿ ನನ್ನ ಘನತೆಗೆ ಧಕ್ಕೆಯನ್ನುಂಟು ಮಾಡಲಾಗಿದೆ. ಹೀಗಿದ್ದರೂ ಸಹ ಅಧಿಕಾರಿಗಳು ಯಾವುದೇ ರೀತಿ ಕ್ರಮ ಜರುಗಿಸದ ಕಾರಣ ನಮ್ಮಂತಹ ಕಾರ್ಮಿಕರ ಕುರಿತು ಅಧಿಕಾರಿಗಳಿಗಿರುವ ನಿರ್ಲಕ್ಷ್ಯವನ್ನು ಮತ್ತೆ ತೋರಿಸುತ್ತಿದ್ದಾರೆ” ಎಂದು ಹೇಳಿದರು.

ಇದೇ ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಪೌರಕಾರ್ಮಿಕರಾದ ಮುನಿರತ್ನ ಅವರು, “ನಮಗೆ ನ್ಯಾಯ ದೊರಕಬಾರದೇ? ನಾವು ದಲಿತ ಸಮುದಾಯದವರು ಮತ್ತು ಬಡ ಜನರು ಎಂದು ನಿರ್ಲಕ್ಷ್ಯ ತೋರಲಾಗುತ್ತಿದೆಯೇ? ನಮಗೂ ಸಮಾನವಾದ ನ್ಯಾಯ ದೊರಕಬೇಕು” ಎಂದರು.

“ಇದೊಂದೇ ಘಟನೆಯಲ್ಲ. ನಾವು ದಿನನಿತ್ಯ ಅಸ್ಪೃಶ್ಯತೆಯನ್ನು ಅನುಭವಿಸುತ್ತೇವೆ. ಮನೆಗಳ ಗೇಟ್ ಗಳನ್ನು ನಾವು ಮುಟ್ಟಬಾರದು, ನಾವು ಕುಡಿಯಲು ನೀರು ಕೇಳಿದಾಗ ಬಾತ್ರೂಮ್ ಚೊಂಬಿನಲ್ಲಿ ನೀರು ಕೊಡುತ್ತಾರೆ. ಈ ರೀತಿಯಲ್ಲಿ ನಾವು ತಾರತಮ್ಯ ಅನುಭವಿಸುತ್ತೇವೆ” ಎಂದು ಪೌರಕಾರ್ಮಿಕರಾದ ರಂಗಮ್ಮ ಹೇಳಿದರು.

“ಈ ಘಟನೆಯು ಬಿಬಿಎಂಪಿಯಲ್ಲಿರುವ ಆಳವಾದ ಮತ್ತು ವ್ಯವಸ್ಥಿತವಾದ ಸಮಸ್ಯೆಯನ್ನು ಎತ್ತಿತೋರಿಸುತ್ತದೆ. ದಲಿತ ಪೌರಕಾರ್ಮಿಕರ, ಅದರಲ್ಲೂ ಮಹಿಳಾ ಕಾರ್ಮಿಕರ, ಶೋಷಣೆಯುಕ್ತ ಕೆಲಸದ ವಾತಾವರಣ ಯಾವ ರೀತಿಯಲ್ಲಿ ಪ್ರತಿಪಾದಿಸಲಾಗುತ್ತಿದೆ ಮತ್ತು ಹೇಗೆ ಇದ್ದಕ್ಕಿದ್ದಂತೆ ಕೆಲಸದಿಂದ ವಜಾಗೊಳಿಸುವ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ ಎಂದು ತೋರಿಸುತ್ತದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಈ ಕೂಡಲೇ ಎಲ್ಲ ಪೌರಕಾರ್ಮಿಕರಿಗೆ ನ್ಯಾಯಯುತ ಮತ್ತು ಘನತೆಯುಕ್ತ ಕೆಲಸದ ವಾತಾವರಣವನ್ನು ರೂಪಿಸಬೇಕು” ಎಂದು ಎಐಸಿಸಿಟಿಯು ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಹೇಳಿದರು.

ಪೌರಕಾರ್ಮಿಕರ ಆಗ್ರಹಗಳೇನು?

ಬ್ಯಾಡರಹಳ್ಳಿ ಪೊಲೀಸರು ಶೀಘ್ರ ಕ್ರಮ ಕೈಗೊಂಡು ಆರೋಪಿಗಳನ್ನು ತಡಮಾಡದೆ ಬಂಧಿಸಬೇಕು. ಅನ್ಯಾಯವಾಗಿ ಹಲ್ಲೆ ಹಾಗೂ ದೌರ್ಜನ್ಯಕ್ಕೆ ಒಳಗಾದ ಪೌರಕಾರ್ಮಿಕರಿಗೆ ತಲಾ ₹10 ಲಕ್ಷ ಪರಿಹಾರ ದೊರಕಿಸಿಕೊಡಬೇಕು. ಪೌರಕಾರ್ಮಿಕರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅವರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವುದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು ಎಂದು ಪೌರಕಾರ್ಮಿಕರ ಸಂಘ ಆಗ್ರಹಿಸಿದೆ.

“ಸಾರ್ವಜನಿಕರಿಂದ ಇಂತಹ ಹಿಂಸಾತ್ಮಕ ದಾಳಿಗಳು ಮತ್ತು ಕಿರುಕುಳದಿಂದ ಪೌರ ಕಾರ್ಮಿಕರನ್ನು ರಕ್ಷಿಸುವುದು ಬಿಬಿಎಪಿಯ ಆದ್ಯ ಕರ್ತವ್ಯವಾಗಬೇಕು. ಈ ಘಟನೆಯ ಬಗ್ಗೆ ಚರ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ರೂಪಿಸಲು ನಮ್ಮ ಸಂಘಟನೆಯೊಂದಿಗೆ ತುರ್ತು ಸಭೆ ಕರೆಯಬೇಕು. ಬಿಬಿಎಂಪಿ, ಸರ್ಕಾರ ಈ ಘಟನೆಯ ಗಂಭೀರತೆಯನ್ನು ಪರಿಗಣಿಸಬೇಕು ಮತ್ತು ಸಾರ್ವಜನಿಕ ಆರೋಗ್ಯ ಮೂಲಸೌಕರ್ಯದ ಅತ್ಯಗತ್ಯ ಭಾಗವಾಗಿರುವ ಪೌರಕಾರ್ಮಿಕರನ್ನು ರಕ್ಷಿಸಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

ಇದನ್ನೂ ಓದಿ; ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್ (75) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...