Homeಕರ್ನಾಟಕಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವೆಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು 

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದರು.

ಪೌರ ಕಾರ್ಮಿಕರ ಸಂಬಳ 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದೇವೆ

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಳ್ಳತನ ಆರೋಪ | ದಲಿತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿ, ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...