Homeಮುಖಪುಟಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ಚಿತ್ರಹಿಂಸೆಗೊಳಗಾಗಿ ಹತ್ಯೆಯಾದ ಮೂವರು ನಾಗರಿಕರ ಕುಟುಂಬಸ್ಥರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿದ್ದಾರೆ.

ಸಂತ್ರಸ್ತರ ಕುಟುಂಬದ ಸದಸ್ಯರನ್ನು ಪೂಂಛ್‌ ಜಿಲ್ಲೆಯ ಟೋಪಾ ಪಿರ್ ಗ್ರಾಮದಿಂದ ರಾಜೌರಿಗೆ ರಾಜನಾಥ್ ಸಿಂಗ್ ಅವರ ಭೇಟಿಗೆ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮೂವರು ನಾಗರಿಕರ ಚಿತ್ರಹಿಂಸೆ ಮತ್ತು ಸಾವಿನಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ನೀಡುವಂತೆ ಸಚಿವರಲ್ಲಿ ಸಂತ್ರಸ್ತ ಕುಟುಂಬ ಕೇಳಿಕೊಂಡಿದೆ. ಇದೇ ವೇಳೆ ಸಚಿವರು ನ್ಯಾಯದ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಹಾಗೂ ಸೂರಂಕೋಟೆಯಲ್ಲಿ ನಿವೇಶನ ನೀಡುವುದಾಗಿ ಸಂತ್ರಸ್ತ ಕುಟುಂಬಕ್ಕೆ ಈಗಾಗಲೇ ಜಿಲ್ಲಾಡಳಿತ ಭರವಸೆ ನೀಡಿದೆ. ಇದರಲ್ಲಿ ಈಗಾಗಲೇ ತಲಾ 10 ಲಕ್ಷ ರೂ.ಗಳ ಚೆಕ್‌ಗಳನ್ನು ಪಾವತಿಸಿದೆ.

ಕಳೆದ ತಿಂಗಳು ರಜೌರಿಯ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೇನಾ ಯೋಧರು ಹತರಾದ ನಂತರ ರಾಜನಾಥ್‌ ಸಿಂಗ್ ಅವರು ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿನ  ಪರಿಸ್ಥಿತಿಯ ಬಗ್ಗೆ ಹಿರಿಯ ಸೇನಾ ಅಧಿಕಾರಿಗಳು ರಕ್ಷಣಾ ಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ.

ನಿನ್ನೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಜಿಲ್ಲೆಯ ಟೋಪಾ ಪಿರ್ ಗ್ರಾಮದಲ್ಲಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು ಮತ್ತು ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದರು. ಭದ್ರತಾ ಪಡೆಗಳು ತಮ್ಮೊಂದಿಗಿದ್ದಾರೆ ಎಂದು ಕುಟುಂಬಗಳಿಗೆ ಭರವಸೆ ನೀಡಿದ ಅವರು ಈಗಾಗಲೇ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಕೆಲವು ಅಧಿಕಾರಿಗಳನ್ನು ತಮ್ಮ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...