Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...