Homeಮುಖಪುಟಪೊಲೀಸರ ದೌರ್ಜನ್ಯ ವಿಚಾರಣೆಗೆ ಹೈಕೋರ್ಟ್‌‌ನಲ್ಲಿ ಸಮಿತಿ: ಸಿಜೆಐ

ಪೊಲೀಸರ ದೌರ್ಜನ್ಯ ವಿಚಾರಣೆಗೆ ಹೈಕೋರ್ಟ್‌‌ನಲ್ಲಿ ಸಮಿತಿ: ಸಿಜೆಐ

- Advertisement -
- Advertisement -

ಅಧಿಕಾರಿಗಳಿಂದ, ಮುಖ್ಯವಾಗಿ ಪೊಲೀಸರಿಂದ ಸಾಮಾನ್ಯ ಜನರಿಗೆ ಆಗುವ ದೌರ್ಜನ್ಯಗಳನ್ನು ತನಿಖೆ ಮಾಡಲು ಹೈಕೋರ್ಟ್‌‌ಗಳ ಮುಖ್ಯ ನ್ಯಾಯಾಧೀಶ ನೇತೃತ್ವದಲ್ಲಿ ಸ್ಥಾಯಿ ಸಮಿತಿ ರಚಿಸಲು ಒಪ್ಪಿಗೆ ಇದೆ ಎಂದು ಸುಪ್ರೀಂ ಕೋರ್ಟ್‌‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ.ರಮಣ ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳೂ ತೀವ್ರತರನಾದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದನ್ನು ಸಿಜೆಐ ಗಮನಿಸಿದ್ದಾರೆ. ಉತ್ತರಪ್ರದೇಶದ ಗೋರಖ್‌ಪುರದಲ್ಲಿ ಪೊಲೀಸ್‌ ಅಧಿಕಾರಿಗಳು ಹೋಟೆಲ್‌ ಮೇಲೆ ದಾಳಿ ಮಾಡಿದಾಗ ಉದ್ಯಮಿಯ ಸಾವು ಸಂಭವಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ತಂದೆ, ಮಗನಾದ ಪಿ.ಜಯರಾಜ್‌ ಮತ್ತು ಜೆ.ಬೆನ್ನಿಕ್ಸ್‌‌ ಎಂಬವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಒಂಬತ್ತು ಪೊಲೀಸರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಲಾಕ್‌ಡೌನ್‌ ವೇಳೆ ಜಿಲ್ಲಾಡಳಿತಗಳ ಅಧಿಕಾರಿಗಳು ನಾಗರಿಕರ ಮೇಲೆ ದಬ್ಬಾಳಿಕೆ ನಡೆಸಿರುವ ವಿಡಿಯೋಗಳು ಹರಿದಾಡಿವೆ.

“ಅಧಿಕಾರಿಗಳು, ಅದರಲ್ಲೂ ಪೊಲೀಸ್ ಅಧಿಕಾರಿಗಳು ಮಾಡುತ್ತಿರುವ ಕೆಲಸವನ್ನು ನೋಡಿ ನಾವು ತುಂಬಾ ವಿಚಲಿತರಾಗಿದ್ದೇವೆ. ಅಧಿಕಾರಿಗಳಿಂದ, ಮುಖ್ಯವಾಗಿ ಪೊಲೀಸರಿಂದ ನಡೆಯುವ ದೌರ್ಜನ್ಯಗಳ ಕುರಿತ ದೂರುಗಳನ್ನು ವಿಚಾರಣೆಗೆ ಒಳಪಡಿಸಲು ಹೈಕೋರ್ಟ್‌‌ಗಳ ಮುಖ್ಯನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸ್ಥಾಯಿ ಸಮಿತಿ ರಚನೆಗೆ ನನ್ನ ಒಪ್ಪಿಗೆ ಇದೆ” ಎಂದು ನ್ಯಾಯಾಲಯದಲ್ಲಿ ಸಿಜೆಐ ತಿಳಿಸಿದ್ದಾರೆ.

ಛತ್ತೀಸ್‌ಘಡದ ಇಂದಿನ ಕಾಂಗ್ರೆಸ್‌ ಸರ್ಕಾರ, ಇಲ್ಲಿನ ಹೆಚ್ಚುವರಿ ಪೊಲೀಸ್‌ ನಿರ್ದೇಶಕನ ಮೇಲೆ ದಾಖಲಿಸಿರುವ ಪ್ರಕರಣಗಳ (ದೇಶದ್ರೋಹ, ಹಲವು ಅಪರಾಧ ಕೃತ್ಯಗಳು, ಸುಲಿಗೆ, ಬೆದರಿಕೆ) ವಿಚಾರಣೆ ವೇಳೆ ಕೋರ್ಟ್‌ ಅಧಿಕಾರಿಗಳ ದಬ್ಬಾಳಿಕೆಯನ್ನು ಪ್ರಸ್ತಾಪಿಸಿದೆ.

ರಾಜಕೀಯ ಸೇಡು

ಪೊಲೀಸರು ರಾಜಕೀಯ ಸೇಡಿಗೆ ಗುರಿಯಾಗುತ್ತಿರುವುದನ್ನು ಮುಖ್ಯವಾಗಿ ಗಮನಿಸಿದ ಪೀಠವು, “ಇದು ದುರಂತ” ಎಂದು ಬಣ್ಣಿಸಿದೆ. ಮೌಖಿಕವಾಗಿ ಪ್ರಸ್ತಾಪಿಸಿರುವ ಸಿಜೆಐ, “ಒಂದು ರಾಜಕೀಯ ಪಕ್ಷ ಅಧಿಕಾರದಲ್ಲಿದ್ದಾಗ ಪೊಲೀಸ್ ಅಧಿಕಾರಿಗಳು ಆ ಪಕ್ಷದೊಂದಿಗೆ ಇರುತ್ತಾರೆ. ಮತ್ತೊಂದು ಹೊಸ ಪಕ್ಷ ಅಧಿಕಾರಕ್ಕೆ ಬಂದಾಗ, ಹಿಂದಿನ ಪಕ್ಷದೊಂದಿಗೆ ಇದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದಿದ್ದಾರೆ.

ಸಿಂಗ್‌ ಅವರ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ರಕ್ಷಣೆ ನೀಡಿದೆ.

ಇದನ್ನೂ ಓದಿರಿ: ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...