Homeಮುಖಪುಟಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್‌ ಗವಾಯಿ) ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬುಧವಾರ (ಏಪ್ರಿಲ್.16) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಮೇ 13ರಂದು ಹಾಲಿ ಸಿಜೆಐ ಖನ್ನಾ ಅವರ ನಿವೃತ್ತಿಯ ನಂತರ, ಮೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಗವಾಯಿ, ಹಾಲಿ ಸಿಜೆಐ ಖನ್ನಾ ನಂತರ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.

ಕಳೆದ ವರ್ಷದ ನವೆಂಬರ್ 11 ರಂದು 51ನೇ ಸಿಜೆಐ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಆಗಿದೆ.

ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಆರು ತಿಂಗಳಿಗಿಂತ ಹೆಚ್ಚು ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ನವೆಂಬರ್ 23, 2025 ರಂದು ನಿವೃತ್ತರಾಗಲಿದ್ದಾರೆ.

ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದ ನ್ಯಾಯಮೂರ್ತಿ ಗವಾಯಿ ಅವರು, ನವೆಂಬರ್ 14, 2003ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 12, 2005ರಂದು ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

ನ್ಯಾಯಮೂರ್ತಿ ಗವಾಯಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು, ಅವುಗಳು ಮಹತ್ವದ ತೀರ್ಪುಗಳನ್ನು ನೀಡಿವೆ.

ಡಿಸೆಂಬರ್ 2023ರಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು.

ರಾಜಕೀಯ ನಿಧಿ ಸಂಗ್ರಹಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

4:1 ಬಹುಮತದಿಂದ, 2016ರಲ್ಲಿ 1,000 ಮತ್ತು 500 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಭಾಗವಾಗಿದ್ದರು.

6:1 ಬಹುಮತದಿಂದ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳು ಸಾಂವಿಧಾನಿಕ ಅಧಿಕಾರ ಹೊಂದಿವೆ ಎಂದು ಮಹತ್ವದ ತೀರ್ಪು ನೀಡಿದ ಏಳು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

ನ್ಯಾಯಮೂರ್ತಿ ಗವಾಯಿ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ಪಕ್ಷಗಳ ನಡುವಿನ ಮುದ್ರೆಯಿಲ್ಲದ ಅಥವಾ ಸರಿಯಾದ ಮುದ್ರೆಯಿಲ್ಲದ ಒಪ್ಪಂದದಲ್ಲಿನ ಮಧ್ಯಸ್ಥಿಕೆ ಷರತ್ತು ಜಾರಿಗೊಳಿಸಬಹುದಾಗಿದೆ. ಏಕೆಂದರೆ, ಅಂತಹ ದೋಷವನ್ನು ಸರಿಪಡಿಸಬಹುದು ಮತ್ತು ಒಪ್ಪಂದವನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೀರ್ಪು ನೀಡಿತ್ತು.

ಕಾರಣ ಕೇಳಿ ನೋಟಿಸ್ ನೀಡದೆ ಯಾವುದೇ ಕಟ್ಟಡಗಳನ್ನು ಕೆಡವಬಾರದು, ನೋಟಿಸ್ ನೀಡಿದ ಬಳಿಕ ಅದಕ್ಕೆ ಪ್ರತಿಕ್ರಿಯಿಸಲು ಕಟ್ಟಡ ಮಾಲೀಕರಿಗೆ 15 ದಿನಗಳ ಸಮಯವಕಾಶ ನೀಡಬೇಕು ಎಂಬುವುದು ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ಇಡೀ ದೇಶಕ್ಕೆ ಮಾರ್ಗಸೂಚಿಗಳನ್ನು ರೂಪಿಸಿ ನೀಡಿದ ಮಹತ್ವದ ತೀರ್ಪು ನೀಡಿದ ಪೀಠದ ನೇತೃತ್ವವನ್ನು ನ್ಯಾಯಮೂರ್ತಿ ಗವಾಯಿ ವಹಿಸಿದ್ದರು.

ಇದಲ್ಲದೆ, ನ್ಯಾಯಮೂರ್ತಿ ಗವಾಯಿ ಅವರು ಅರಣ್ಯಗಳು, ವನ್ಯಜೀವಿಗಳು ಮತ್ತು ಮರಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಆಲಿಸುವ ಪೀಠದ ಮುಖ್ಯಸ್ಥರಾಗಿದ್ದಾರೆ.

ಮಾರ್ಚ್ 16, 1985ರಂದು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ನ್ಯಾಯಮೂರ್ತಿ ಗವಾಯಿ ಅವರು, ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿದ್ದರು.

ಆಗಸ್ಟ್ 1992ರಿಂದ ಜುಲೈ 1993ರವರೆಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನ್ಯಾಯಮೂರ್ತಿ ಗವಾಯಿ ನೇಮಕಗೊಂಡಿದ್ದರು.

ಜನವರಿ 17, 2000ದಂದು ನಾಗಪುರ ಪೀಠಕ್ಕೆ ಸರ್ಕಾರಿ ಪ್ಲೀಡರ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯಮೂರ್ತಿ ಗವಾಯಿ ಅವರನ್ನು ನೇಮಿಸಲಾಗಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...