Homeಮುಖಪುಟಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

- Advertisement -
- Advertisement -

ಸುಪ್ರೀಂ ಕೋರ್ಟ್ ವಕೀಲರ ಸಂಘ(ಎಸ್‌ಸಿಬಿಎ)ದ ಅಧ್ಯಕ್ಷ ಆದಿಶ್ ಅಗರ್ವಾಲ್ ಅವರನ್ನು ಇಂದು ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತರಾಟೆಗೆ ತೆಗೆದುಕೊಂಡರು.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ, ಬಾಂಡ್‌ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ದ ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.

ಈ ವಿಚಾರವನ್ನು ಇಂದು ವಿಚಾರಣೆ ವೇಳೆ ಅದಿಶ್ ಅಗರ್ವಾಲ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಹಿರಿಯ ವಕೀಲರ ಹೊರತಾಗಿ ನೀವು ಎಸ್‌ಸಿಬಿಎ ಅಧ್ಯಕ್ಷರು. ನನ್ನ ಸ್ವಯಂಪ್ರೇರಿತ ಅಧಿಕಾರಗಳ ಕುರಿತಂತೆ ನೀವು ಪತ್ರ ಬರೆದಿದ್ದೀರಿ. ಇವುಗಳೆಲ್ಲಾ ಪ್ರಚಾರ ಉದ್ದೇಶ ಹೊಂದಿವೆ. ನಾನು ಇನ್ನಷ್ಟು ಮಾತಾಡುವಂತೆ ಮಾಡಬೇಡಿ, ಅದು ಚೆನ್ನಾಗಿರದು” ಎಂದು ಖಾರವಾಗಿ ಹೇಳಿದರು.

ಅಗರ್ವಾಲ್ ಅವರ ಪತ್ರಕ್ಕೆ ನಮ್ಮ ಬೆಂಬಲವಿಲ್ಲ ಎಂದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಚಾರದಿಂದ ದೂರ ಉಳಿದರು.

ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರ್ವಾಲ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾ.12 ರಂದು ಪತ್ರ ಬರೆದಿದ್ದರು. ಆದರೆ, ವಕೀಲರ ಸಂಘದ ಇತರ ಪದಾಧಿಕಾರಿಗಳು ಆಗರ್ವಾಲ್ ಅವರ ಪತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಪತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿದ್ದರು.

ಅಧ್ಯಕ್ಷ ಆದಿಶ್ ಅಗರ್ವಾಲ್ ಅವರಿಗೆ ವಕೀಲರ ಸಂಘದ ಹೆಸರಿನಲ್ಲಿ ಪತ್ರ ಬರೆಯಲು ಸಂಘದ ಸದಸ್ಯರು ಅನುಮತಿ ನೀಡಿಲ್ಲ. ಅವರು ಪತ್ರದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವೂ ಸಂಘದ ಸದಸ್ಯರದ್ದಲ್ಲ. ಆದಿಶ್ ಅಗರ್ವಾಲ್ ಅವರ ಪತ್ರ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿದೆ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಇದನ್ನು ವಕೀಲರ ಸಂಘ ಬಲವಾಗಿ ಖಂಡಿಸುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದರು.

ಸುಪ್ರೀಂ ಕೋರ್ಟ್ ವಕೀಲರ ಸಂಘದ ಲೆಟರ್ ಹೆಡ್‌ನಲ್ಲಿ ಪ್ರಕಟನೆ ಹೊರಡಿಸಿದ್ದ ಸಂಘದ ಗೌರವ ಕಾರ್ಯದರ್ಶಿ ರೋಹಿತ್ ಪಾಂಡೆ, ಆದಿಶ್ ಅಗರ್ವಾಲ್ ಅವರು ಸುಪ್ರೀಂ ಕೋರ್ಟ್ ಆದೇಶದ ವಿರುದ್ದ ರಾಷ್ಟ್ರಪತಿಗೆ ಪತ್ರ ಬರೆದಿರುವುದು ಅವರ ವೈಯುಕ್ತಿಕ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೆ, ಸಂಘದ ಇತರ ಸದಸ್ಯರ ಅನುಮತಿ ಇಲ್ಲದೆ ಪತ್ರ ಬರೆದಿರುವ ಆದಿಶ್ ಅಗರ್ವಾಲ್ ಅವರ ನಡೆಯನ್ನು ಖಂಡಿಸಿದ್ದರು.

“ದೇಣಿಗೆ ನೀಡಿದವರ ಹೆಸರು ಮತ್ತು ಅವರು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಮೊತ್ತವನ್ನು ಬಹಿರಂಗಪಡಿಸಿದರೆ, ಅವರಿಂದ ಕಡಿಮೆ ದೇಣಿಗೆ ಪಡೆದ ಪಕ್ಷಗಳು ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ದೇಣಿಗೆ ಪಡೆಯುವಾಗ ಹೆಸರು ಬಹಿರಂಗಪಡಿಸುವುದಿಲ್ಲ ಎಂಬ ಮಾತು ಕೊಡಲಾಗಿತ್ತು. ಹೆಸರು ಬಹಿರಂಗಪಡಿಸಿದರೆ ವಚನ ಭಂಗ ಮಾಡಿದಂತೆ ಆಗುತ್ತದೆ” ಎಂದು ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ : ಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...