Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...