Homeಮುಖಪುಟಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು ನಡೆಸುತ್ತಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ವಕೀಲರಾದ ಸುಭಾಷ್ ಚಂದ್ರನ್ ಕೆ ಆರ್ ಮತ್ತು ಅನಿರುದ್ಧ್ ಕೆ ಪಿ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷೆ ಐಷೆ ಘೋಷ್, ಕಣ್ಗಾವಲು ಪ್ರತಿಭಟನಾಕಾರರ ಮೂಲಭೂತ ಹಕ್ಕುಗಳ ಮೇಲೆ ಅಸಂವಿಧಾನಿಕ ಹಸ್ತಕ್ಷೇಪವಾಗಿದೆ ಎಂದು ವಾದಿಸಿದರು. ಸಿಜೆಪಿ ಆರಂಭದಿಂದಲೂ ದೇಶದಾದ್ಯಂತ ಆಯೋಜಿಸುತ್ತಿರುವ ಪ್ರತಿಭಟನೆಯಲ್ಲಿ ಘೋಷ್ ಸಕ್ರಿಯರಾಗಿ ಭಾಗವಾಹಿಸುತ್ತಿದ್ದಾರೆ.

ಇದಕ್ಕೂ ಮೊದಲು, ಸುಪ್ರೀಂ ಕೋರ್ಟ್ ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರ ಗುಂಪು ಪ್ರತಿಭಟನಾಕಾರರ ಪೊಲೀಸ್ ಕಣ್ಗಾವಲಿನ ಜೊತೆಗೆ ವೀಡಿಯೊಗ್ರಫಿಯನ್ನು ನಿಲ್ಲಿಸಲು ನಿರ್ದೇಶನಗಳನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಸೂಚಿಸಿದೆ.

ನೀಟ್ ಪರೀಕ್ಷಾ ಅಕ್ರಮಗಳ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಒತ್ತಾಯಿಸಿ ಸತತ 19 ನೇ ದಿನವೂ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಅರ್ಜಿ ಸಲ್ಲಿಸಲಾಗಿದೆ.

ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರ ನಿಯೋಗವು, 25-30 ಪೊಲೀಸ್ ಛಾಯಾಗ್ರಾಹಕರು ಹಾಜರಿದ್ದು, ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಭಟನಾಕಾರರು ನಿದ್ರಿಸುತ್ತಿರುವಾಗಲೂ ಅವರ ಫೋಟೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಿದರು.

“ವಿದ್ಯಾರ್ಥಿಗಳನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂದು ನೋಡಲು ನಾವು ಇಲ್ಲಿಗೆ ಬಂದಿದ್ದೇವೆ. ಸೋನಮ್ ವಾಂಗ್‌ಚುಕ್ ಮತ್ತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಭೇಟಿ ಮಾಡಲು ಬಂದ ಎಲ್ಲರ ಛಾಯಾಚಿತ್ರಗಳನ್ನು ಪೊಲೀಸರು ತೆಗೆದುಕೊಳ್ಳುತ್ತಿರುವುದನ್ನು ನಾವು ಕಂಡುಕೊಂಡಿದ್ದೇವೆ” ಎಂದು ವಕೀಲ ಸುಭಾಷ್ ಚಂದ್ರನ್ ವರದಿಗಾರರಿಗೆ ತಿಳಿಸಿದರು.

ನೀಟ್-ಯುಜಿ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ 13 ವಿದ್ಯಾರ್ಥಿಗಳ ಆತ್ಮಹತ್ಯೆಗಳಿಗೆ ಹೊಣೆಗಾರಿಕೆಯನ್ನು ಒತ್ತಾಯಿಸಿ ಜೂನ್ 20 ರಂದು ಸಿಜೆಪಿ ಧರಣಿ ಆರಂಭವಾಯಿತು. ವಾಂಗ್‌ಚುಕ್ ಜೂನ್ 28 ರಂದು ಸೇರಿಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು.

ಗುರುವಾರದ ವೇಳೆಗೆ, ಪ್ರತಿಭಟನೆ 27 ನೇ ದಿನಕ್ಕೆ ತಲುಪಿತ್ತು. ಸಂಘಟಕರು ಉಲ್ಲೇಖಿಸಿದ ವೈದ್ಯಕೀಯ ವರದಿಗಳು ವಾಂಗ್‌ಚುಕ್ 9 ಕೆಜಿ ತೂಕ ಕಡಿಮೆಯಾಗಿದ್ದು, ರಕ್ತದಲ್ಲಿನ ಗ್ಲೂಕೋಸ್ 67 mg/dL ಮತ್ತು ಬಿಪಿ 107/70 ಕ್ಕೆ ಇಳಿದಿದೆ ಎಂದು ತಿಳಿಸಿವೆ.

ವಾಂಗ್‌ಚುಕ್ ಅವರ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ, ಅವರ ಕ್ಷೀಣಿಸುತ್ತಿರುವ ಆರೋಗ್ಯವನ್ನು ಸುಧಾರಿಸಲು ಅಗತ್ಯವಿರುವ ಯಾವುದೇ ವೈದ್ಯಕೀಯ ಸೌಲಭ್ಯವನ್ನು ತಕ್ಷಣವೇ ಒದಗಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಬೇಕು ಎಂದು ದೆಹಲಿ ನ್ಯಾಯಾಲಯ ಬುಧವಾರ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶಿಸಿದೆ.

ವಾಂಗ್‌ಚುಕ್ ಅವರ ಆರೋಗ್ಯದ ಮೇಲೆ ಕಾಳಜಿ ವಹಿಸುವಂತೆ ಕೋರಿ ತುರ್ತು ಹಸ್ತಕ್ಷೇಪಕ್ಕಾಗಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸುವಾಗ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಈ ನಿರ್ದೇಶನವನ್ನು ನೀಡಿತು.

ಸೋನಮ್ ಅವರ ಹದಗೆಡುತ್ತಿರುವ ಆರೋಗ್ಯದ ಕುರಿತು ಸೋಮವಾರ ಅರುಂಧತಿ ರಾಯ್, ನಸೀರುದ್ದೀನ್ ಶಾ, ರತ್ನ ಪಾಠಕ್ ಶಾ ಮತ್ತು ಜಯತಿ ಘೋಷ್ ಸೇರಿದಂತೆ ಗಣ್ಯ ನಾಗರಿಕರಿಂದ ಜಂಟಿ ಮನವಿಯನ್ನು ಸಲ್ಲಿಸಿದರು. “ಮುಂದಿನ ದೀರ್ಘ ಮತ್ತು ಹೆಚ್ಚು ಕಷ್ಟಕರವಾದ ಹೋರಾಟದ ಹಿತದೃಷ್ಟಿಯಿಂದ” ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಬೇಕು ಎಂದು ಅವರು ಪ್ರತಿಭಟನಾಕಾರರನ್ನು ಒತ್ತಾಯಿಸಿದರು. ಆದರೆ ಪ್ರಧಾನ್ ಅವರ ರಾಜೀನಾಮೆಗೆ ಕೊಡುವವರೆಗೂ ಉಪವಾಸ ನಿಲ್ಲಿಸುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ವಾಂಗ್ಚುಕ್ ಅವರನ್ನು “ರಾಷ್ಟ್ರೀಯ ಸಂಪತ್ತು” ಎಂದು ಕರೆದು ಉಪವಾಸ ಕೈಬಿಡುವಂತೆ ಮನವಿ ಮಾಡಿದರು.

ಸಿಜೆಪಿ ಪ್ರತಿಭಟನೆಗೆ ಹೆಚ್ಚುತ್ತಿರುವ ರಾಜಕೀಯ ಬೆಂಬಲ

ವಾರಾಂತ್ಯದಲ್ಲಿ ಎಸ್‌ಪಿ ಸಂಸದ ಪುಷ್ಪೇಂದ್ರ ಸರೋಜ್, ಕೇರಳದ ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ, ಎಎಪಿ ನಾಯಕರಾದ ಅತಿಶಿ ಮತ್ತು ಸಂಜಯ್ ಸಿಂಗ್ ಅವರು ಭೇಟಿ ನೀಡು ಆಂದೋಲನಕ್ಕೆ ಬೆಂಬಲ ಸೂಚಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಬೆಂಬಲ ಕೋರಿ ಸಿಜೆಪಿ ಪತ್ರ ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...