Homeಮುಖಪುಟಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಹಾಗೂ ಸೌರವ್ ದಾಸ್ ಬಿಡುಗಡೆ: ಮಧ್ಯಾಹ್ನ 2ಕ್ಕೆ CJP ಪತ್ರಿಕಾಗೋಷ್ಠಿ

ಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಹಾಗೂ ಸೌರವ್ ದಾಸ್ ಬಿಡುಗಡೆ: ಮಧ್ಯಾಹ್ನ 2ಕ್ಕೆ CJP ಪತ್ರಿಕಾಗೋಷ್ಠಿ

- Advertisement -
- Advertisement -

ಚುನಾವಣಾ ಆಯೋಗದ ವಿವಾದಾತ್ಮಕ ಧೋರಣೆ ಹಾಗೂ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ದೆಹಲಿಯಲ್ಲಿ ನಿಗದಿತ ಪ್ರತಿಭಟನೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವೆಂಬ ನೆಪದಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲ್ಪಟ್ಟಿದ್ದ ಸಿಜೆಪಿ ಸಂಘಟನೆಯ ಪ್ರಮುಖ ನಾಯಕರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ದೆಹಲಿ ಕಾಂಟ್ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿದ್ದ ಈ ಮೂವರು ಯುವ ನಾಯಕರನ್ನು ಅಧಿಕಾರಿಗಳು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರ ಮುಂದೆ ಹಾಜರುಪಡಿಸಿದ್ದು, ವಿಚಾರಣೆಯ ಬಳಿಕ ಮ್ಯಾಜಿಸ್ಟ್ರೇಟ್ ಅವರನ್ನು ಬಿಡುಗಡೆಗೊಳಿಸಲು ಸೂಚಿಸಿದ್ದಾರೆ.

ದೇಶದಲ್ಲಿ ಪ್ರಜಾಸತ್ತಾತ್ಮಕ ಪ್ರತಿಭಟನೆಗಳ ಧಮನ ಮತ್ತು ನಾಗರಿಕ ಹಕ್ಕುಗಳ ದಮನದ ಯತ್ನಗಳಿಗೆ ಇದೀಗ ಕಾನೂನಾತ್ಮಕವಾಗಿ ತಡೆಬಿದ್ದಂತಾಗಿದೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿ ಮತ್ತು ‘ಮತಗಳ್ಳತನ’ದ ವಿರುದ್ಧ ಧ್ವನಿ ಎತ್ತಿದ್ದ ನಾಗರಿಕ ಹಕ್ಕು ಕಾರ್ಯಕರ್ತರನ್ನು ದೆಹಲಿ ಪೊಲೀಸರು ಮನಸೋಇಚ್ಛೆ ವಶಕ್ಕೆ ಪಡೆದಿದ್ದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಂವಿಧಾನಬದ್ಧವಾದ ಪ್ರತಿಭಟನಾ ಹಕ್ಕನ್ನು ಹತ್ತಿಕ್ಕಲು ಆಡಳಿತ ವ್ಯವಸ್ಥೆ ನಡೆಸಿದ ಈ ತಂತ್ರ ವಿಫಲಗೊಂಡಿದ್ದು, ನಾಯಕರ ಬಿಡುಗಡೆಯು ಹೋರಾಟಗಾರರಿಗೆ ದೊಡ್ಡ ನೈತಿಕ ಜಯ ತಂದುಕೊಟ್ಟಿದೆ.

ಮಧ್ಯಾಹ್ನ 2ಕ್ಕೆ ಪತ್ರಿಕಾಗೋಷ್ಠಿ:

ನಾಯಕರ ಬಿಡುಗಡೆಯ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಯು ಮಧ್ಯಾಹ್ನ 2 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹೋರಾಟದ ರೂಪರೇಷೆಗಳನ್ನು ಬಹಿರಂಗಪಡಿಸುವುದಾಗಿ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಿದ್ದರು’ ದೆಹಲಿ ಪೊಲೀಸರ ವಿರುದ್ಧ ಧೃವ್ ರಾಠೀ ಆರೋಪ

ಸಿಜೆಪಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸುವುದನ್ನು ತಡೆಯಲು ಶನಿವಾರ ಮುಂಜಾನೆ ಗುರುಗ್ರಾಮದ ನಿವಾಸದಿಂದಲೇ ಪೊಲೀಸರಿಂದ ಬಲವಂತವಾಗಿ ವಶಕ್ಕೆ ಪಡೆದುಕೊಳ್ಳಲ್ಪಟ್ಟಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠೀ ಅವರು ಭಾನುವಾರ...

ದೆಹಲಿ ಪ್ರತಿಭಟನೆ: ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ 4 ಹಿಂದುತ್ವವಾದಿಗಳ ಬಂಧನ!

ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಂತಿಯುತವಾಗಿ ಸಾಗುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಎಳೆದಾಡಿ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಿಂದೂ ರಕ್ಷಾ ದಳ'ದ ನಾಲ್ವರು...

ದೆಹಲಿ ಹೋರಾಟಕ್ಕೆ ಬೆಂಬಲ: ಫ್ರೀಡಂಪಾರ್ಕ್ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.10: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಎಐಡಿಎಸ್‌ಒ, ಕೆವಿಎಸ್, ಎಐಎಸ್‌ಎಫ್, ಎಸ್‌ಎಫ್‌ಐ, ಎಐಎಸ್‌ಎ ಸೇರಿದಂತೆ ಇನ್ನಿತರೆ ಎಡ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ...

ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು...

ಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಗುರುದ್ವಾರದಲ್ಲಿ ಆಶ್ರಯ ಪಡೆದ ಪ್ರತಿಭಟನಾಕಾರರು, ಜಿರಳೆ ಆಂಟೆನಾ ಹೆಲ್ಮೆಟ್ ಧರಿಸಿ ವಿನೂತನ ಪ್ರತಿರೋಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ‘ಜಿರಳೆ ಜನತಾ ಪಾರ್ಟಿ’ (ಸಿಜೆಪಿ) ಮತ್ತು ಅದರ ಬೆಂಬಲಿಗರನ್ನು ತಡೆಯಲು ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತಾ ವ್ಯವಸ್ಥೆ...

ಬೆಂಗಳೂರಿನಲ್ಲಿ ಎಸ್ಐಆರ್ ವಿರೋಧಿ ಪ್ರತಿಭಟನೆ: ವಿದ್ಯಾರ್ಥಿ ಸಂಘಟನೆಗಳ ನಾಯಕರ ಬಂಧನ: ಕಾಂಗ್ರೆಸ್ ಸರ್ಕಾರದ ದ್ವಂದ್ವ ನಿಲುವಿನ ವಿರುದ್ಧ ಆಕ್ರೋಶ

ಕರ್ನಾಟಕದಲ್ಲಿ ಎಸ್‌ಐಆರ್ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದು ಕಾಂಗ್ರೆಸ್ ಸರ್ಕಾರದ ಪ್ರಜಾಸತ್ತಾತ್ಮಕ ಮುಖವಾಡವನ್ನು ಬಯಲುಮಾಡಿದೆ ಎಂದು ಎಐಎಸ್‌ಎ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಬಿಜೆಪಿಯ ದಮನಕಾರಿ...

ಸಿಜೆಪಿ ಪ್ರತಿಭಟನೆಗೆ ಬೆಂಬಲ: ಸಿಪಿಐ(ಎಂ) ನಾಯಕರು, ತುಷಾರ್ ಗಾಂಧಿ ಪೊಲೀಸರ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ ಭಾಗಗಳಿಂದ ಬೆಂಬಲ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ದೆಹಲಿ ಮತ್ತು ಮುಂಬೈನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ...

ಮೋದಿ, ಶಾ ದೇಶದ ಜನರ ವಿರುದ್ಧ ಯುದ್ಧ ಸಾರಲು ಬಯಸುತ್ತಿದ್ದಾರೆ: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ

ನವದೆಹಲಿ: ನಕ್ಸಲ್ ಪೀಡಿತ ಪ್ರದೇಶಗಳಿಂದ ಸಿಆರ್‌ಪಿಎಫ್ ಪಡೆಗಳನ್ನು ಕರೆಸಿ ದೆಹಲಿಯಲ್ಲಿ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದ ಜನರ ವಿರುದ್ಧವೇ ಯುದ್ಧ ಸಾರಲು ಬಯಸುತ್ತಿದ್ದಾರೆ ಎಂದು...

ಹಲ್ಲೆ ಸುದ್ದಿ ತಳ್ಳಿ ಹಾಕಿದ ‘ಫ್ಯಾಕ್ಟ್‌ ಚೆಕ್ಕರ್’ ಝುಬೈರ್ : ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮದ ವಿರುದ್ಧ ಕ್ರಮದ ಎಚ್ಚರಿಕೆ

ಬೆಂಗಳೂರು ಮೆಟ್ರೋದಲ್ಲಿ ತನ್ನ ಹಲ್ಲೆ ನಡೆದಿದೆ ಎಂಬ ಸುದ್ದಿಯನ್ನು ಫ್ಯಾಕ್ಟ್‌ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ತಳ್ಳಿಹಾಕಿದ್ದಾರೆ. ಝುಬೈರ್ ಮೇಲೆ ಬೆಂಗಳೂರು ಮೆಟ್ರೋದಲ್ಲಿ ಸಹ ಪ್ರಯಾಣಿಕರು ಹಲ್ಲೆ...

ಬಿಜೆಪಿಗೆ ರಿಲಯನ್ಸ್ ಬೆಂಬಲಿತ ಸಂಸ್ಥೆಗಳ ದೇಣಿಗೆ ವರದಿ ಹಂಚಿಕೊಂಡ ಎಲೋನ್ ಮಸ್ಕ್; ‘ಪ್ರಧಾನಿ ಅಂಬಾನಿ’ ಎಂದು ವ್ಯಂಗ್ಯ, ಏಕಸ್ವಾಮ್ಯದ ವಿರುದ್ಧ ವಾಗ್ದಾಳಿ

ನವದೆಹಲಿ: ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಎದುರಾಗಿರುವ ವಿಳಂಬದ ಹಿನ್ನೆಲೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಮುಖ್ಯಸ್ಥ ಎಲೋನ್...