HomeಅಂಕಣಗಳುSIRಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

- Advertisement -
- Advertisement -

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಮುಂದಾಗಿದೆ. ಮೆರವಣಿಗೆ ರದ್ದುಗೊಳಿಸುವಂತೆ ಪೊಲೀಸರು ನೋಟಿಸ್ ನೀಡಿದರೂ ಪ್ರತಿಭಟನೆಯಿಂದ ಹಿಂದೆ ಸರಿಯಲು ನಿರಾಕರಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರ ಬಂಧನ ಹಾಗೂ ನ್ಯಾಯಾಂಗ ಬಂಧನವನ್ನು ವಿರೋಧಿಸಿ ಸಿಜೆಪಿ ಈ ಪ್ರತಿಭಟನೆಗೆ ಕರೆ ನೀಡಿದೆ.

ಶುಕ್ರವಾರ ಸಂಜೆ 5 ಗಂಟೆಗೆ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸುವ ಮೆರವಣಿಗೆ ನಡೆಸಲು ಸಿಜೆಪಿ ನಿರ್ಧರಿಸಿತ್ತು. ಆದರೆ, ಪ್ರತಿಭಟನೆಯನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ದೀಪ್ಕೆ ಅವರಿಗೆ ನೋಟಿಸ್ ಜಾರಿ ಮಾಡಿದರು. ಕರೋಲ್ ಬಾಗ್‌ನಲ್ಲಿರುವ ಎನ್‌ಸಿಪಿ (ಎಸ್‌ಪಿ) ನಾಯಕರೊಬ್ಬರ ನಿವಾಸದಲ್ಲಿ ಪೊಲೀಸ್ ಅಧಿಕಾರಿ ಈ ನೋಟಿಸ್ ತಲುಪಿಸಿದ್ದಾರೆ. ನೋಟಿಸ್ ಸ್ವೀಕರಿಸಿದ ದೀಪ್ಕೆ, ಪ್ರತಿಭಟನೆಯನ್ನು ರದ್ದುಗೊಳಿಸಲು ನಿರಾಕರಿಸಿದರು. ತಮ್ಮ ಪಕ್ಷದ ನಾಯಕರನ್ನು ರಾಷ್ಟ್ರಧ್ವಜ ಹಾರಿಸಿದ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಅವರು ಪಟ್ಟು ಹಿಡಿದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಜಂತರ್ ಮಂತರ್‌ಗೆ ಪ್ರವೇಶಿಸಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಜಂತರ್ ಮಂತರ್ ಅನ್ನು ಸಾರ್ವಜನಿಕ ಪ್ರತಿಭಟನೆಗಳಿಗೆ ಅಧಿಕೃತ ಸ್ಥಳವೆಂದು ಪರಿಗಣಿಸುವುದನ್ನು ದೆಹಲಿ ಪೊಲೀಸರು ನಿಲ್ಲಿಸಿದ ಬಳಿಕವೂ ಅಲ್ಲಿಗೆ ಪ್ರವೇಶಿಸಿದ ಆರೋಪ ಅವರ ಮೇಲಿದೆ. ಈ ಬಂಧನವನ್ನು ಖಂಡಿಸಿರುವ ಸಿಜೆಪಿ, ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುವ ಹಕ್ಕನ್ನೇ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದೆ.

ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟಿರುವ ಪೊಲೀಸರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲು ಸಜ್ಜಾಗಿದೆ. ಈ ನಿರ್ಧಾರಕ್ಕೆ ಗೃಹ ಸಚಿವಾಲಯದ ಸಮಿತಿಯ ಶಿಫಾರಸುಗಳು ಮತ್ತು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಇತ್ತೀಚಿನ ಮೌಖಿಕ ಅಭಿಪ್ರಾಯಗಳು ಹಿನ್ನೆಲೆಯಾಗಿವೆ ಎಂದು ವರದಿಯಾಗಿದೆ. ಆದರೆ, ಪ್ರತಿಭಟನೆಗೆ ಗುರುತಿಸಲಾದ ಸ್ಥಳಗಳಿಂದ ಜಂತರ್ ಮಂತರ್ ಅನ್ನು ಕೈಬಿಟ್ಟಿರುವುದರಿಂದ ಸಂಸತ್ತು ಮತ್ತು ಸುಪ್ರೀಂ ಕೋರ್ಟ್‌ನ ಸಮೀಪ ಸೇರಿದಂತೆ ಕೇಂದ್ರ ದೆಹಲಿಯಲ್ಲಿ ಜನರು ಪ್ರತಿಭಟನೆ ನಡೆಸುವ ಅವಕಾಶವನ್ನು ಸೀಮಿತಗೊಳಿಸಲಾಗುತ್ತಿದೆ ಎಂದು ನಿರ್ಧಾರವನ್ನು ವಿರೋಧಿಸುವವರು ವಾದಿಸುತ್ತಿದ್ದಾರೆ.

ಪ್ರತಿಭಟನೆಗಳಿಗೆ ಪರ್ಯಾಯವಾಗಿ ರಾಮಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಸಿಬಿಡಿ ಮೈದಾನಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಆದರೆ, ರಾಜಧಾನಿಯ ಪ್ರಮುಖ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವ ಅವಕಾಶವನ್ನು ನಿರ್ಬಂಧಿಸುವುದರಿಂದ ಜನರ ಪ್ರತಿಭಟನೆಯ ಹಕ್ಕಿಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ಇದೇ ವೇಳೆ, ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಯ ಹಿನ್ನೆಲೆಯಲ್ಲಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 25 ಸಾವಿರಕ್ಕೂ ಹೆಚ್ಚು ಪೊಲೀಸ್ ಹಾಗೂ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮತ್ತು ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಕೂಡ ‘ಆಡಳಿತಾತ್ಮಕ ಕಾರಣ’ ನೀಡಿ ಸೆಂಟ್ರಲ್ ಪಾರ್ಕ್ ಅನ್ನು ಶುಕ್ರವಾರ ಮತ್ತು ಶನಿವಾರ ಸಾರ್ವಜನಿಕರಿಗೆ ಮುಚ್ಚಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಸಿಜೆಪಿ ಒತ್ತಾಯಿಸುತ್ತಿದೆ. ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಪ್ರತಿಭಟನಾ ಸ್ಥಳಗಳ ಮೇಲಿನ ನಿರ್ಬಂಧ, ನಾಯಕರ ಬಂಧನ ಮತ್ತು ರಾಷ್ಟ್ರಧ್ವಜ ಮೆರವಣಿಗೆಗೆ ತಡೆ ಹಾಕಿರುವುದು ರಾಜಧಾನಿಯಲ್ಲಿ ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. 

ಸುಪ್ರೀಂ ಕೋರ್ಟ್‌ನ ವಿಚಾರಣೆ ಈ ವಿವಾದದಲ್ಲಿ ಮಹತ್ವ ಪಡೆದುಕೊಂಡಿದ್ದು, ಪ್ರತಿಭಟನೆಯ ಹಕ್ಕು ಮತ್ತು ಸಾರ್ವಜನಿಕ ಸುವ್ಯವಸ್ಥೆಯ ನಡುವಿನ ಸಂಘರ್ಷದ ಬಗ್ಗೆ ನ್ಯಾಯಾಲಯ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...