Homeಮುಖಪುಟಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ: ಸಿಎಂ ಇಬ್ರಾಹಿಂ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ: ಸಿಎಂ ಇಬ್ರಾಹಿಂ

- Advertisement -
- Advertisement -

ಜನತಾದಳ ಸೆಕ್ಯೂಲರ್‌(ಜೆಡಿಎಸ್‌) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಕರ್ನಾಟಕ ರಾಜ್ಯಾಧ್ಯಕ್ಷ ಸಿಎಂ. ಇಬ್ರಾಹಿಂ ಅವರನ್ನು ಉಲ್ಲೇಖಿಸಿ ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಬೆಂಗಳೂರಿನ ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

ಸಭೆಯ ಬಳಿಕ ಮಾತನಾಡಿ ಸಿಎಂ ಇಬ್ರಾಹಿಂ “ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ, ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ?’ಎಂದು ಪ್ರಶ್ನಿಸಿದ್ದಾರೆ.

ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೆ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಹೆಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.

ಎರಡು ಲೋಕಸಭಾ ಸ್ಥಾನ ಮತ್ತು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ದೇವೇಗೌಡರು 92ನೇ ವಯಸ್ಸಿನಲ್ಲಿ ತಮ್ಮ ಸಿದ್ದಾಂತವನ್ನು ತ್ಯಾಗ ಮಾಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ದೇವೇಗೌಡರಿಗೆ ಮೂರು ಅವಕಾಶಗಳನ್ನು ನೀಡಿದ್ದೆವು. ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಸಭೆ ಮಾಡಿದ್ದೆವು. ಎರಡನೇ ಸಭೆ ನವೆಂಬರ್ 9ರಂದು ಕೇರಳದಲ್ಲಿ ನಡೆಯಿತು. ಈ ಸಭೆ ಬಳಿಕ ಬಿಜೆಪಿ ಬೆಂಬಲಿಸುವ ನಿರ್ಧಾರ ಬದಲಿಸುವಂತೆ ನಾವು ದೇವೇಗೌಡರಿಗೆ ಮನವಿ ಮಾಡಿದ್ದೆವು. ಅವರು ನಿರ್ಧಾರ ಬದಲಿಸಲಿಲ್ಲ. ಹಾಗಾಗಿ, ಇಂದು (ಡಿ.11) ಸಭೆ ನಡೆಸಿ ದೇವೇಗೌಡರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದೇವೆ. ನೂತನ ಅಧ್ಯಕ್ಷರಾಗಿ ಮಾಜಿ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.

ನಾವು ಪಕ್ಷದ ಸಂಬಂಧ ಚುನಾವಣಾ ಆಯೋಗದ ಬಳಿ ಹೋಗುತ್ತೇವೆ. ಕಾನೂನು ಹೋರಾಟ ಮಾಡುತ್ತೇವೆ. ನಮ್ಮದೇ ನಿಜವಾದ ಜೆಡಿಎಸ್ ಪಕ್ಷ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ನವೆಂಬರ್ 17ರಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿತ್ತು. ಡಿಸೆಂಬರ್ 9ರಂದು ನಡೆದ ಜೆಡಿಎಸ್‌ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹಿಂ ಮತ್ತು ಸಿ.ಕೆ ನಾಣು ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದೇವೇಗೌಡು ತಿಳಿಸಿದ್ದಾರೆ.

ಇದನ್ನೂ ಓದಿ : ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...