Homeಅಂತರಾಷ್ಟ್ರೀಯಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಕೊನಕ್ರಿ, ಗಿನಿಯಾ: ಪಶ್ಚಿಮ ಆಫ್ರಿಕಾದ  ಗಿನಿಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ನಡುವೆ  ಗುಂಪು ಘರ್ಷಣೆ ನಡೆದ ಪರಿಣಾಮ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಭಾನುವಾರ  ವರದಿಯಾಗಿದೆ.

ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್’ಜೆರೆಕೋರ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವಿನ ಘರ್ಷಣೆಯಲ್ಲಿ ಡಜನ್ ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಅನಾಮಧೇಯ ವೈದ್ಯರೊಬ್ಬರು ಮಾಧ್ಯಮವೊಂದಕ್ಕೆ ಮಾತನಾಡಿ, ಆಸ್ಪತ್ರೆಯಲ್ಲಿ ಕಣ್ಣು ಹಾಯಿಸಿದಷ್ಟು ದೂರದಲ್ಲಿ ಶವಗಳ ಸಾಲುಗಳಿವೆ. ಇತರ ದೇಹಗಳು ಹಜಾರದಲ್ಲಿ ನೆಲದ ಮೇಲೆ ಬಿದ್ದಿವೆ, ಶವಾಗಾರ ತುಂಬಿದೆ. ಸುಮಾರು 100ಕ್ಕೂ ಮಂದಿ ಸತ್ತಿದ್ದಾರೆ  ಎಂದು ಹೇಳಿದ್ದಾರೆ.

ಇದೆಲ್ಲವೂ ರೆಫರಿಯವರ ವಿವಾದಾತ್ಮಕ ನಿರ್ಧಾರದಿಂದ ಪ್ರಾರಂಭವಾಯಿತು. ನಂತರ ಅಭಿಮಾನಿಗಳು ಕ್ರೀಡಾಂಗಣವನ್ನು ಆಕ್ರಮಿಸಿದರು  ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೋಗಳನ್ನು ತಕ್ಷಣವೇ ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಪಂದ್ಯದ ಹೊರಗೆ ಬೀದಿಯಲ್ಲಿ ಅವ್ಯವಸ್ಥೆಯ ದೃಶ್ಯಗಳು ಮತ್ತು ಹಲವಾರು ಮೃತ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣುತ್ತಿವೆ.

ಉದ್ರಿಕ್ತ ಫುಟ್ಬಾಲ್  ಪ್ರೇಕ್ಷಕರು ಎನ್ ಜೆರೆಕೋರ್‌ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದರೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

2021ರ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಆಯೋಜಿಸಲಾದ ಪಂದ್ಯಾವಳಿ ಇದಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಇಂತಹ ಪಂದ್ಯಾವಳಿಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಡೌಂಬೌಯಾ ಮುಂದಿನ ವರ್ಷ ನಡೆಯಲಿರುವ ನಿರೀಕ್ಷಿತ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಮೈತ್ರಿಗಳನ್ನು ರೂಪುಗೊಳ್ಳಿಸುವುದಕ್ಕೆ ಈ ಪಂದ್ಯಾವಳಿಯನ್ನು ಅಯೋಜಿಸಲಾಗಿತ್ತು ಎನ್ನಲಾಗಿದೆ.

2020 ರ ಸೆಪ್ಟೆಂಬರ್‌ನಲ್ಲಿ ಅಧ್ಯಕ್ಷ ಆಲ್ಫಾ ಕಾಂಡೆ ಅವರನ್ನು ಪದಚ್ಯುತಗೊಳಿಸುವ ಮೂಲಕ ಡೌಂಬೌಯಾ ಗಿನಿಯಾದ ಅಧಿಕಾರವನ್ನು ವಶಪಡಿಸಿಕೊಂಡರು. ಅಂತರರಾಷ್ಟ್ರೀಯ ಒತ್ತಡದ ಅಡಿಯಲ್ಲಿ, ಅವರು 2024 ರ ಅಂತ್ಯದ ವೇಳೆಗೆ ಅಧಿಕಾರವನ್ನು ನಾಗರಿಕ ಸರ್ಕಾರಕ್ಕೆ ಮರಳಿ ಹಸ್ತಾಂತರಿಸುವುದಾಗಿ ವಾಗ್ದಾನ ಮಾಡಿದರು. ಆದರೆ ನಂತರ ಅವರು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೌಂಬೌಯಾ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರ ಮೇಲೆ ಇಂದಿಗೂ ದಮನ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಅನೇಕ ವಿರೋಧ ಪಕ್ಷದ ನಾಯಕರನ್ನು ಬಂಧಿಸಿ, ಅವರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗಿದೆ ಅಥವಾ ಗಡಿಪಾರು ಮಾಡಲು ಒತ್ತಾಯಿಸಲಾಗಿದೆ.

ಡೌಂಬೌಯಾ ಅವರ ಬೆಂಬಲಿಗರು ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರ ಉಮೇದುವಾರಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.ಈ ಚುನಾವಣೆಯನ್ನು 2025ರಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳ ಹೊರತಾಗಿಯೂ, ಗಿನಿಯಾ ಬಡ ರಾಷ್ಟ್ರವಾಗಿ ಉಳಿದಿದೆ. ಇದು ದಶಕಗಳಿಂದ ನಿರಂಕುಶ ಸರ್ಕಾರಗಳಿಂದ ಆಳಲ್ಪಟ್ಟಿದೆ.

ಮಾಲಿ, ಬುರ್ಕಿನಾ ಫಾಸೊ ಮತ್ತು ನೈಜರ್‌ನಲ್ಲಿ ಮಿಲಿಟರಿ ಸಹಾಯದಿಂದ 2020 ರಿಂದ ಪಶ್ಚಿಮ ಆಫ್ರಿಕಾದ ಅಧಿಕಾರವನ್ನು ವಶಪಡಿಸಿಕೊಂಡ ಹಲವಾರು ಅಧಿಕಾರಿಗಳಲ್ಲಿ ಡೌಂಬೌಯಾ ಒಬ್ಬರಾಗಿದ್ದಾರೆ.

ಗಿನಿಯಾದ ಆಗ್ನೇಯದ ಎನ್’ಜೆರೆಕೋರ್‌ ನಲ್ಲಿ ನಡೆದ ಈ ಘರ್ಷಣೆಯ ಪ್ರದೇಶವು ಸುಮಾರು 200,000 ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂ ಓದಿ…ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...