Homeಮುಖಪುಟಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ: ಒಬ್ಬ ಕಾರ್ಯಕರ್ತನ ಸಾವು - ಬಿಜೆಪಿ ಆರೋಪ

ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ: ಒಬ್ಬ ಕಾರ್ಯಕರ್ತನ ಸಾವು – ಬಿಜೆಪಿ ಆರೋಪ

ಪ್ರತಿಭಟನಾ ನಿರತ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ನಿರ್ದಯವಾಗಿ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ

- Advertisement -
- Advertisement -

ಇಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ.

ಮೃತನನ್ನು ಪುಲಿನ್ ರಾಯ್ ಎಂದು ಗುರುತಿಸಲಾಗಿದ್ದು, ಲಾಠಿಚಾರ್ಜ್ ಸಮಯದಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ಪ್ರತಿಭಟನಾ ನಿರತ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ನಿರ್ದಯವಾಗಿ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. “ನಮ್ಮ ಪಕ್ಷದ ಯುವ ವಿಭಾಗವು ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿತ್ತು. ಯುವ ಮೋರ್ಚಾದ ಕಾರ್ಯಕರ್ತರು ಆಡಳಿತ ಭವನದತ್ತ ಸಾಗುತ್ತಿದ್ದರು. ಪೊಲೀಸರು ಯಾವುದೇ ಪ್ರಚೋದನೆಯಿಲ್ಲದೆ ಕೋಪಗೊಂಡು, ನಮ್ಮ ಕಾರ್ಯಕರ್ತರೊಬ್ಬರ ಸಾವಿಗೆ ಕಾರಣವಾಗುವಂತೆ ಲಾಠಿಚಾರ್ಜ್ ಮಾಡಿದ್ದಾರೆ. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು” ಎಂದು ಹೇಳಿದರು.

ಇದನ್ನೂ ಓದಿ: ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

ಸಾವಿರಾರು ಬಿಜೆಪಿ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಿ ಮಿನಿ ಸೆಕ್ರೆಟರಿಯಟ್ ಕಟ್ಟಡದ ಕಡೆಗೆ ಹೋಗಲು ಪ್ರಾರಂಭಿಸಿದಾಗ ಘರ್ಷಣೆ ಉಂಟಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದಾಗ ಲಾಠೀಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಒಂದು ವಾರದ ಹಿಂದೆ ಬಿಜೆಪಿಯು ಕಾರ್ಯಕ್ರಮವನ್ನು ಘೋಷಿಸಿದ್ದರಿಂದ ಸಿಲಿಗುರಿಯಲ್ಲಿ ಭಾರಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸಿಲಿಗುರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ಸಂಸದ ಮತ್ತು ರಾಷ್ಟ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ, “ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗಿದೆ” ಎಂದು ಕಿಡಿ ಕಾರಿದ್ದಾರೆ.

“ಬಿಜೆಪಿ ಅನಗತ್ಯವಾಗಿ ಹಿಂಸೆಯನ್ನು ಪ್ರಚೋದಿಸುತ್ತದೆ. ಅವರು ಶಾಂತಿಯುತ ಪ್ರತಿಭಟನೆ ನಡೆಸಬಹುದಿತ್ತು” ಎಂದು ಟಿಎಂಸಿ ಸಂಸದ ಪ್ರೊಫೆಸರ್ ಸೌಗತಾ ರಾಯ್ ತಿಳಿಸಿದ್ದಾರೆ.


ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...