Homeಕರ್ನಾಟಕಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

- Advertisement -
- Advertisement -

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿಯ ಹುಸೇನ್ ನಗರದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಎಂದು ಗುರುತಿಸಲಾಗಿದೆ.

ಗಲಾಟೆ ಪ್ರಕರಣ ಸಂಬಂಧ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚಾನಳ್ ಶೇಖರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರಿಂಗ್ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಜ.3ರಂದು ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾಗಿದ್ದರು. ಇದಕ್ಕೆ ಜನಾರ್ದನ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬ್ಯಾನರ್ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಎರಡು ತಂಡಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅವಂಬಾವಿ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜನಾರ್ದನ ರೆಡ್ಡಿ, “ಭರತ್ ರೆಡ್ಡಿ ಮತ್ತು ಅವರ ಅಪ್ಪ ಕ್ರಿಮಿನಲ್‌ಗಳು. ಅವರಿಗೆ ಜನಪ್ರಿಯತೆ ಕಡಿಮೆಯಾಗಿದೆ, ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಸೋಲುವ ಭೀತಿ ಶುರುವಾಗಿದೆ. ನಾವು ವಾಲ್ಮೀಕಿ ಪುತ್ಥಳಿ ಸ್ಥಾಪಿಸಿದ ಸ್ಥಳದಲ್ಲೇ ಮತ್ತೆ ಪುತ್ಥಳಿ ಸ್ಥಾಪನೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಮನೆಗೆ ಅಡ್ಡಲಾಗಿದೆ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ನಾನು ಗಂಗಾವತಿಯಲ್ಲಿದ್ದೆ. ಮನೆ ಮುಂದೆ ಗನ್ ಹಿಡಿದುಕೊಂಡು ಒಂದಷ್ಟು ಜನರು ಗುಂಪು ಸೇರಿದ್ದಾರೆ ಎಂಬ ವಿಷಯ ತಿಳಿದು, ನಾನು ಶ್ರೀರಾಮುಲು ಅವರಿಗೆ ಕರೆ ಮಾಡಿದೆ. ಅವರು ಸ್ಥಳಕ್ಕೆ ಬಂದರು. ನಂತರ ನಾನು ಗಂಗಾವತಿಯಿಂದ ಬಂದೆ. ನಾನು ಬಂದ ತಕ್ಷಣ ಕಲ್ಲು ತೂರಾಟ ಮಾಡಿದರು. ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಅದು ತಪ್ಪಿ ವಾಹನದ ಮೇಲೆ ಬಿತ್ತು, ಅವರು ನನ್ನ ಕೊಲೆಗೆ ಸಂಚು ರೂಪಿಸಿದ್ದರು” ಎಂದು ಆರೋಪಿಸಿದ್ದಾರೆ.

“ಬ್ಯಾನರ್ ನೆಪ ಮಾತ್ರ. ಅವರು ಕ್ರಿಮಿನಲ್ ಸಂಚು ರೂಪಿಸಿದ್ದರು. ನನ್ನ ಮನೆಯ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಮೊದಲೇ ಕಲ್ಲು, ಬಾಟಲಿ ಸಂಗ್ರಹಿಸಿಟ್ಟಿದ್ದರು. ಸಂಜೆ ಆಗುವಾಗ ದಾಳಿ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.

ಶಾಸಕ ಭರತ್ ರೆಡ್ಡಿ ಮಾತನಾಡಿ, “ಜನಾರ್ದನ ರೆಡ್ಡಿಗೆ ಬಳ್ಳಾರಿ ಅಭಿವೃದ್ದಿ ಆಗಬೇಕು ಎನ್ನುವ ಉದ್ದೇಶ ಇಲ್ಲ. ಅವರು ತನ್ನ ಸ್ವಂತ ಬೆಳವಣಿಗೆ ಮಾಡಿಕೊಳ್ಳುತ್ತಿದ್ದಾರೆ. ನಾನು ಶಾಂತವಾಗಿ ಇದ್ದೇನೆ, ನಾನು ಮಾತನಾಡಿದರೆ ಬಳ್ಳಾರಿ ಭಸ್ಮ ಆಗುತ್ತೆ. ನಾನು ಮನಸ್ಸು ಮಾಡಿದ್ದರೆ ಅಂದುಕೊಂಡಿದ್ದನ್ನು 5 ನಿಮಿಷದಲ್ಲಿ ಮಾಡಿ ಮುಗಿಸುತ್ತಿದ್ದೆ. ಆದರೆ, ನಾನು ಓದಿದವನು, ಲಂಡನ್‌ನಲ್ಲಿ ಓದಿ ಬಂದವನು. ನಾನು ಹುಟ್ಟು ಶ್ರೀಮಂತ, ಜನಾರ್ದನ ರೆಡ್ಡಿ ಜನರನ್ನು ಲೂಟಿ ಮಾಡಿ ಶ್ರೀಮಂತರಾದವರು” ಎಂದಿದ್ದಾರೆ.

“ನಾನು ಶಾಸಕನಾದ ಬಳಿಕ ಬಳ್ಳಾರಿಯಲ್ಲಿ ಯಾವುದೇ ಅಹಿತರ ಘಟನೆ ಅಗಿಲ್ಲ. ಜನಾರ್ದನ ಕಡೆಯವರು ಈಗ ಮತ್ತೆ ಶುರು ಮಾಡಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗಾಗಿ, ಜನಾರ್ದನ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ದ ದಲಿತ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು” ಎಂದು ಆಗಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...