Homeಮುಖಪುಟಭೆಂಡಿ ಬಜಾರ್‌ನಲ್ಲಿ ಘರ್ಷಣೆ: 50 ಕ್ಕೂ ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲು

ಭೆಂಡಿ ಬಜಾರ್‌ನಲ್ಲಿ ಘರ್ಷಣೆ: 50 ಕ್ಕೂ ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದಕ್ಷಿಣ ಮುಂಬೈನ ಭೆಂಡಿ ಬಜಾರ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು 50 ಕ್ಕೂ ಹೆಚ್ಚು ಜನರ ವಿರುದ್ಧ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂಬೈನ ಭೆಂಡಿ ಬಜಾರ್ ಪ್ರದೇಶದ ಮೌಲಾನಾ ಆಜಾದ್ ರಸ್ತೆಯ ಗೋಲ್ ದೇವಲ್ ದೇವಸ್ಥಾನದ ಜಂಕ್ಷನ್ ಬಳಿ ಶುಕ್ರವಾರ ಸಂಜೆ ಮೆರವಣಿಗೆ ವೇಳೆ ಘರ್ಷಣೆ ನಡೆದಿದೆ.

ಕೆಲವು ವ್ಯಕ್ತಿಗಳು ಮೆರವಣಿಗೆಯಲ್ಲಿ ಜೋರಾಗಿ ಡಿಜೆ ಹಾಡು ಹಾಕಿ ನೃತ್ಯ ಮಾಡುತ್ತಿದ್ದರು, ‌‌‌ಘೋಷಣೆಗಳನ್ನು ಕೂಗುತ್ತಿದ್ದರು. ಈ ವೇಳೆ ವ್ಯಕ್ತಿಯೋರ್ವ ಕಲ್ಲು ತೂರಾಟ ನಡೆಸಿದ್ದು, ಬಳಿಕ ಘರ್ಷಣೆ ನಡೆದಿದೆ. ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 141, 143, 145, 147, 149, 160, 427, ಮಹಾರಾಷ್ಟ್ರ ಪೊಲೀಸ್ ಕಾಯಿದೆ ಸೆಕ್ಷನ್ 37(1)(3) ಮತ್ತು 135 ಹಾಗೂ ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜೆಜೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದಲ್ಲದೆ ಆರೋಪಿಗಳ ಮೇಲೆ ಅಕ್ರಮ ಸಭೆ, ಗಲಭೆಗೆ ಸಂಬಂಧಿಸಿದ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನು ಓದಿ; ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...