Homeಕರ್ನಾಟಕಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

- Advertisement -
- Advertisement -

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೊಪ್ಪಳ ತಾಲೂಕು ನಾಗೇಶನಹಳ್ಳಿ ಗ್ರಾಮದ ರವಿ ಎಂಬವರು ನೀಡಿದ ದೂರಿನ ಅನ್ವಯ ಭಾರತೀಯ ನ್ಯಾಯಸಂಹಿತೆ (ಬಿಎನ್‌ಎಸ್) ಸೆಕ್ಷನ್ 189(2), 191(2), 118(1), 115(2), 351(2), 352, 191 ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(r), 3(1)(s), 3(2)(va) ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 16 (ಬುಧವಾರ) ನಾಗೇಶನಹಳ್ಳಿ ಗ್ರಾಮದ ಇಮ್ಮಡಿ ಪುಲಿಕೇಶಿ ಯುವಕ ಮಿತ್ರಮಂಡಳಿ ವತಿಯಿಂದ ಗ್ರಾಮದ ಪ್ರಾಥಮಿಕ ಶಾಲೆಯಿಂದ ಸರ್ಕಾರಿ ಪ್ರೌಢ ಶಾಲೆಯವರೆಗೆ ಗಣೇಶ ವಿಸರ್ಜನೆ ಮೆರವಣಿ ಹಮ್ಮಿಕೊಳ್ಳಲಾಗಿತ್ತು. ರಾತ್ರಿ 11.30ರ ವೇಳೆಗೆ ಯುವಕರ ತಂಡ ಗ್ರಾಮದ ಮೈಲಮ್ಮದೇವಿ ಗುಡಿಯ ಹತ್ತಿರ ಬಂದು ಡಿಜೆ ಹಾಕಿಕೊಂಡು ಜೋರಾಗಿ ಶಬ್ದ ಮಾಡುತ್ತಾ ಕುಣಿಯುತ್ತಿದ್ದರು. ಈ ವೇಳೆ ನಮ್ಮ ಸಮುದಾಯದ ರಮೇಶ್ ಎನ್ನುವವರು ಸ್ಥಳಕ್ಕೆ ಹೋಗಿ, ರಾತ್ತಿ ತುಂಬಾ ಹೊತ್ತಾಗಿದೆ. ಹಾಗಾಗಿ, ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ. ಸಂದರ್ಭದಲ್ಲಿ ಮಂಜುನಾಥ ಈಳೀಗೇರ, ಮಂಜುನಾಥ ಚಮಕನಹಳ್ಳಿ, ರಮೇಶ ವಣಗೇರಿ, ಶರಣಪ್ಪ ನಾಯಕ ಹಾಗೂ ರಾಜಪ್ಪ ಈಳೀಗೇರ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ರವಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿಗಳು ನಾವು ಕೂರಿಸಿದ್ದ ಗಣಪತಿಯನ್ನು ಎತ್ತಿ ಹೊರಗಡೆ ಎಸೆಯುತ್ತೇವೆ ಎಂದು ಮೈಲಮ್ಮದೇವಿಯ ಗುಡಿಯ ಬಳಿ ಬಂದಿದ್ದರು. ಈ ವೇಳೆ ನಮ್ಮ ಸಮುದಾಯದ ಹಿರಿಯರು ತಿಳಿ ಹೇಳಿ ಕಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೈಲಮ್ಮದೇವಿ ಗುಡಿಯ ಗಲಾಟೆ ಬಳಿಕ, ನಾನು ನನ್ನ ತಮ್ಮ ಅಂಬರೀಶನನ್ನು ಹುಡುಕುತ್ತಾ ಅತ್ತೆಯ ಮಗನಾದ ರಾಮಸ್ವಾಮಿ ಕಲ್ಗುಡಿಯೊಂದಿಗೆ ಗಾಡಿಯಲ್ಲಿ ನಮ್ಮೂರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿಕ ಹೋಗಿದ್ದೆ. ಅಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ತಮ್ಮ ಅಂಬರೀಶನನ್ನು ಮನೆಗೆ ಕರೆದೊಯ್ಯಲು ಮುಂದಾದಾಗ, ಮಂಜುನಾಥ ಈಳೀಗೇರ ಮತ್ತು ಇತರರು ನನ್ನ ಮತ್ತು ಅತ್ತೆಯ ಮಗ ರಾಮಸ್ವಾಮಿಗೆ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿದ್ದಾರೆ. ನಾವು ಆರೋಪಿಗಳಿಗೆ ಸಮಾಧಾನ ಹೇಳಿದರೂ, ಅವರು ಅವರು ನನಗೆ ಕಾಲಿನಿಂದ ಒದ್ದಿದ್ದಾರೆ. ಈ ವೇಳೆ ಬಿಡಿಸಿಕೊಳ್ಳಲು ಬಂದ ರಾಮಸ್ವಾಮಿಯ ಕೈಗೆ ಕಟ್ಟಿಯಿಂದ ಹೊಡೆದು ಗಾಯಗೊಳಿಸಿದ್ದಾರೆ. ಇದನ್ನು ಕಂಡು ಬಿಡಿಸಿಕೊಳ್ಳಲು ಬಂದ ತಮ್ಮ ಅಂಬರೀಶ ಮತ್ತು ಆತನ ಸ್ನೇಹಿತರಿಗೂ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಮಂಜುನಾಥ ಈಳೀಗೇರ, ಮಂಜುನಾಥ ಚಮಕನಹಳ್ಳಿ ಸೇರಿದಂತೆ 31 ಜನರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಘಟನೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ರವಿ ಅವರು, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾದರೂ ಇನ್ನೂ ಆರೋಪಿಗಳ ಬಂಧನವಾಗಿಲ್ಲ. ಹಲ್ಲೆಗೊಳಗಾದ ನಮ್ಮ ಮೇಲೆಯೇ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...