Homeಮುಖಪುಟಮಣಿಪುರದಲ್ಲಿ ಮತ್ತೆ ಘರ್ಷಣೆ | ಒಬ್ಬ ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಮತ್ತೆ ಘರ್ಷಣೆ | ಒಬ್ಬ ಸಾವು, ಹಲವರಿಗೆ ಗಾಯ

- Advertisement -
- Advertisement -

ಮಂಗಳವಾರ ಮಣಿಪುರದ ಚುರಾಚಂದ್‌ಪುರದ ಹೊರವಲಯದಲ್ಲಿ ಹ್ಮಾರ್ ಮತ್ತು ಝೋಮಿ ಬುಡಕಟ್ಟು ಜನಾಂಗದವರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದವು. ಈ ವೇಳೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಲಾಲ್ರೋಪುಯಿ ಪಖುಮಾತೆ (53) ಎಂದು ಗುರುತಿಸಲಾಗಿದೆ. ಹ್ಮಾರ್ ಗುಂಪುಗಳು ತಮ್ಮ ಸಮುದಾಯದ ಧ್ವಜವನ್ನು ಹಾರಿಸುವುದನ್ನು ಜೋಮಿ ಬಣ ವಿರೋಧಿಸಿದಾಗ ಹಿಂಸಾಚಾರ ಭುಗಿಲೆದ್ದಿತು ಎಂದು ವರದಿ ಹೇಳಿವೆ. ಮಣಿಪುರದಲ್ಲಿ ಮತ್ತೆ ಘರ್ಷಣೆ

ವಾಗ್ವಾದ ಪ್ರಾರಂಭವಾಗುತ್ತಿದ್ದಂತೆ ಲಾಠಿಗಳಿಂದ ಶಸ್ತ್ರಸಜ್ಜಿತರಾದ ಗುಂಪು ಕಲ್ಲು ತೂರಾಟದಲ್ಲಿ ತೊಡಗಿದ್ದು, ಇದರಿಂದಾಗಿ ಭದ್ರತಾ ಸಿಬ್ಬಂದಿಗಳು ಜನಸಮೂಹವನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಮತ್ತು ಗಾಳಿಯಲ್ಲಿ ಹಲವಾರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮತ್ತೆ ಘರ್ಷಣೆ

ಭಾನುವಾರ ಝೆನ್‌ಹಾಂಗ್‌ನಲ್ಲಿ ಹ್ಮಾರ್ ಇನ್‌ಪುಯಿ ಪ್ರಧಾನ ಕಾರ್ಯದರ್ಶಿ ರಿಚರ್ಡ್ ಹ್ಮರ್ ಮೇಲೆ ದಾಳಿ ನಡೆಸಿದ ನಂತರ ಚುರಾಚಂದ್‌ಪುರದಲ್ಲಿ ಕರ್ಫ್ಯೂ ವಿಧಿಸಲಾಯಿತು, ಇದು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು ಎಂದು ವರದಿಯಾಗಿದೆ. ಮಂಗಳವಾರ, ಹ್ಮಾರ್ ಇನ್‌ಪುಯಿ ಮತ್ತು ಝೋಮಿ ಕೌನ್ಸಿಲ್ ಬಂದ್‌ ತೆಗೆದುಹಾಕಲು ಶಾಂತಿ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ.

ಮತ್ತೆ ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ, ಜೋಮಿ ವಿದ್ಯಾರ್ಥಿ ಒಕ್ಕೂಟವು ಬುಧವಾರದಿಂದ “ಅನಿರ್ದಿಷ್ಟಾವಧಿ ತುರ್ತು ಬಂದ್” ಘೋಷಿಸಿದ್ದು, ಈ ಪ್ರದೇಶದಲ್ಲಿನ ಅಸ್ಥಿರ ಪರಿಸ್ಥಿತಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಎಲ್ಲಾ ಸಾಮಾನ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ. ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಿರುತ್ತವೆ. ಎಲ್ಲಾ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಸಹ ಮುಚ್ಚಲ್ಪಟ್ಟಿರುತ್ತವೆ. ಎಲ್ಲಾ ಜನರು ತಮ್ಮ ಮನೆಗಳಲ್ಲಿಯೇ ಇರಬೇಕೆಂದು ನಾವು ಸಲಹೆ ನೀಡುತ್ತೇವೆ. ಪರಿಸ್ಥಿತಿ ಸುಧಾರಿಸುವವರೆಗೆ ಈ ತುರ್ತು ಬಂದ್ ಜಾರಿಯಲ್ಲಿರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಜಿಲ್ಲಾಡಳಿತವು ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. “ಎಲ್ಲಾ ವ್ಯಕ್ತಿಗಳು, ಸಮುದಾಯ ಮುಖಂಡರು ಮತ್ತು ಗುಂಪುಗಳು ಮತ್ತಷ್ಟು ಹಿಂಸಾಚಾರದಿಂದ ದೂರವಿರಬೇಕು ಮತ್ತು ಶಾಂತಿ ಮತ್ತು ಸಾಮರಸ್ಯಕ್ಕಾಗಿ ಕೆಲಸ ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಧರುಣ್ ಕುಮಾರ್ ಎಸ್ ಹೇಳಿದ್ದಾರೆ. ಕಾನೂನನ್ನು ಕೈಗೆತ್ತಿಕೊಳ್ಳುವ ಯಾವುದೇ ಪ್ರಯತ್ನವು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿ ನೀಡುವುದಿಲ್ಲ ಮತ್ತು ಅಂತಹ ಯಾವುದೇ ಕೃತ್ಯಗಳನ್ನು ನಡೆಸಿದರೆ ಕಠಿಣ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ಸಮುದಾಯದ ನಾಯಕರು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ತೊಡಗಿಸಿಕೊಳ್ಳುವಂತೆ ಕೇಳಿಕೊಂಡಿದ್ದು, ಜಿಲ್ಲಾಡಳಿತವು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಕಲ್ಲು ತೂರಾಟದಲ್ಲಿ ತೊಡಗಿದ್ದ ಗುಂಪುಗಳನ್ನು ಚದುರಿಸಲು ಭದ್ರತಾ ಪಡೆಗಳು ಧ್ವಜ ಮೆರವಣಿಗೆಗಳನ್ನು ನಡೆಸಿ, ಅಶ್ರುವಾಯು ಮತ್ತು ಎಚ್ಚರಿಕೆ ಗುಂಡು ಹಾರಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ. ಗುಂಪಿನಲ್ಲಿದ್ದ ಕೆಲವು ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಆದರೆ ಅದಕ್ಕೆ ಯಾರು ಹೊಣೆಗಾರರು ಎಂಬುದು ಸ್ಪಷ್ಟವಾಗಿಲ್ಲ. ಗಲಭೆಯಲ್ಲಿ ಹಲವಾರು ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...