Homeಮುಖಪುಟದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

- Advertisement -
- Advertisement -

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಭಾನುವಾರ (ಫೆ.1) ಈ ಘಟನೆ ನಡೆದಿದೆ. ದಲಿತ ಸಮುದಾಯದ ಗಣಪತ್ ಚಾವ್ಡಾ ಎಂಬವರ ಮಗನ ಮದುವೆ ಮೆರವಣಿಗೆ ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಬಾಕುಜಿ ಠಾಕೂರ್ ಎಂಬಾತನ ಮನೆ ಮುಂದೆ ಸಾಗುತ್ತಿತ್ತು. ಈ ವೇಳೆ ಠಾಕೂರ್ ಸಮುದಾಯದವರು ತಮ್ಮ ಸಮುದಾಯದಲ್ಲಿ ಶೋಕಾಚರಣೆಯ ಅವಧಿಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿ ಮೆರವಣಿಗೆಯ ಡಿಜೆ ಮ್ಯೂಸಿಕ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಎರಡೂ ಕಡೆಯವರ ನಡುವೆ ವಾಗ್ವಾದ ನಡೆದು ಘರ್ಷಣೆ ಸಂಭವಿಸಿದೆ.

ಈ ವೇಳೆ ದೂರುದಾರರು ತುರ್ತು ಸಹಾಯವಾಣಿ 112ರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಗುಂಪನ್ನು ಚದುರಿಸಿದೆ.

ಘಟನೆ ಸಂಬಂಧ ಎಂಟು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್), ಗುಜರಾತ್ ಪೊಲೀಸ್ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಬಾಕುಜಿ ಠಾಕೂರ್, ಜೀವಂಜಿ ಠಾಕೂರ್ ಮತ್ತು ಒಬ್ಬ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಹೇಳಿದ್ದಾರೆ.

ಜಾತಿಯ ಕಾರಣಕ್ಕೆ ಮಾತ್ರ ಈ ಗಲಾಟೆ ನಡೆದಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪರೇಶ್ ರೇಣುಕಾ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಕ್ಷಣಕ್ಕೆ ಈ ಘಟನೆಯ ಹಿಂದೆ ಜಾತಿ ಜಗಳವಿಲ್ಲ ಎಂದು ಕಂಡು ಬಂದಿದೆ. ದೂರುದಾರರು ಮತ್ತು ಆರೋಪಿಗಳ ನಡುವೆ ದೀರ್ಘಕಾಲದ ಭೂ ವಿವಾದವಿದೆ. 2022 ರಲ್ಲಿ, ಭೂಮಿ ವಿಚಾರಕ್ಕೆ ಇದೇ ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆಗಲೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಗಲಾಟೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಚದ್ರುಮಣ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಎಲ್ಲಾ ಕೋನಗಳಿಂದಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....